


ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ 2015ರ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಉಪ್ಪಿನಂಗಡಿ ಠಾಣಾ ಅಪರಾಧ ಸಂಖ್ಯೆ 158/2015ರ ಪ್ರಕರಣದಲ್ಲಿ ಆರೋಪಿಯಾಗಿದ್ದ ಮಂಗಳೂರು ಕಸಬಾ ಬೇಂಗ್ರೆ ನಿವಾಸಿ ಅಕ್ರಂ @ ಬೋಜ ಅಕ್ರ ಎಂಬಾತ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದನು.


ಮೇ 22, 2026ರಂದು ಉಪ್ಪಿನಂಗಡಿ ಪೊಲೀಸ್ ಠಾಣೆಯ ತನಿಖೆ-2 ಪಿಎಸ್ಐ ಕೌಶೀಕ್ ಬಿಸಿ ನೇತೃತ್ವದಲ್ಲಿ ಸಿಬ್ಬಂದಿಗಳಾದ ಹೆಚ್‌ಸಿ-826 ಶಿವರಾಮ್ ರೈ ಹಾಗೂ ಪಿಸಿ-2277 ಮಹದೇವ್ ಅವರು ಮಂಗಳೂರಿನ ಪಣಂಬೂರಿನಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿಯ ವಿರುದ್ಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಮೂರು ಹಾಗೂ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿರುವುದಾಗಿ ತಿಳಿದುಬಂದಿದೆ.
