


ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿನ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವ್ಯಾಪ್ತಿಯಲ್ಲಿ ಸಂಭವಿಸಿದೆ ಎಂದು ಕೆಲವು ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಪ್ರಸಾರವಾಗುತ್ತಿದೆ.
ಆದರೆ, ಈ ಘಟನೆ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಪುತ್ತೂರಿನಲ್ಲಿ ನಡೆದಿರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪುತ್ತೂರು ಪ್ರದೇಶದಲ್ಲಿ ಸಂಭವಿಸಿರುವುದಾಗಿ ತಿಳಿದು ಬಂದಿದೆ.


ಹೀಗಾಗಿ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾಹಿತಿಗಳನ್ನು ಪರಿಶೀಲಿಸದೆ ನಂಬಬಾರದು ಹಾಗೂ ಯಾವುದೇ ಮಾಹಿತಿ ಅಥವಾ ವಿಡಿಯೋವನ್ನು ಹಂಚಿಕೊಳ್ಳುವ ಮೊದಲು ಅದರ ಸತ್ಯಾಸತ್ಯತೆಯನ್ನು ಖಚಿತಪಡಿಸಿಕೊಳ್ಳುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
