ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಪರಮಾರ್ಗ – ಕುಕ್ಕುತ್ತಡಿ – ಅರೆಪಿಕಟ್ಟ ಸಂಪರ್ಕ ರಸ್ತೆಯ ಕಾಂಕ್ರೀಟಿಕರಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು.

ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಉಜಿರೆಮಾರು ಅವರು ಕಾಮಗಾರಿಗೆ ಚಾಲನೆ ನೀಡಿದರು. ಈ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಂಸದ ಬ್ರಿಜೇಶ್ ಚೌಟ ಅವರು 5 ಲಕ್ಷ ರೂಪಾಯಿ ಅನುದಾನ ಒದಗಿಸಿದ್ದು, ಸ್ಥಳೀಯ ಸಾರ್ವಜನಿಕರ ಬಹುಕಾಲದ ಬೇಡಿಕೆಗೆ ಸ್ಪಂದಿಸಿ ಕಾಮಗಾರಿಯನ್ನು ಆರಂಭಿಸಲಾಗಿದೆ.

ಈ ರಸ್ತೆ ಕಾಮಗಾರಿ ಪೂರ್ಣಗೊಂಡ ಬಳಿಕ ಗ್ರಾಮಸ್ಥರ ಸಂಚಾರಕ್ಕೆ ಹೆಚ್ಚಿನ ಅನುಕೂಲವಾಗಲಿದ್ದು, ಸ್ಥಳೀಯರು ಸಂತಸ ವ್ಯಕ್ತಪಡಿಸಿದ್ದಾರೆ. ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.