

ಸುಳ್ಯ : ಅರಂತೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಡ್ತಲೆ ಸಮೀಪದ ಬೆದ್ರುಪನೆ ಪ್ರದೇಶದಲ್ಲಿ ಸುಮಾರು ಒಂದು ವರ್ಷ ಪ್ರಾಯದ ಗಂಡು ಮರಿ ಆನೆ ಸಾವನ್ನಪ್ಪಿದ ಘಟನೆ ನಡೆದಿದೆ.

ತೋಟದ ಪ್ರದೇಶದಲ್ಲಿ ಮರಿ ಆನೆ ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ದೊಡ್ಡ ಆನೆಗಳ ದಾಳಿಯಿಂದ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಮರಣೋತ್ತರ ಪರೀಕ್ಷೆಯ ಬಳಿಕ ಮರಿ ಆನೆಯ ಸಾವಿನ ನಿಖರ ಕಾರಣ ತಿಳಿದುಬರುವ ಸಾಧ್ಯತೆ ಇದೆ.


