

ಮಾಣಿ : ಮಾಣಿ ಸಮೀಪ ಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಡಿಯೋ ಸ್ಕೂಟರ್ ಸವಾರರೊಬ್ಬರು ಮೃತಪಟ್ಟ ಘಟನೆ ನಡೆದಿದೆ.

ಕಲ್ಲಡ್ಕದಿಂದ ಪುತ್ತೂರಿನತ್ತ ಬರುತ್ತಿದ್ದ ಡಿಯೋ ಸ್ಕೂಟರ್ (KA-21 ED 8227) ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸಭಾರ ಕಲಂದರ್ ಶಾ ಅವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನೆಯ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.


