Screenshot

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು ದಿನಗಳಿಂದ ಮುಂದುವರಿದಿದ್ದ ತೀವ್ರ ಕುತೂಹಲ ಮತ್ತು ಹೈಡ್ರಾಮಾಗೆ ಕೊನೆಗೂ ಭಾವುಕ ತೆರೆ ಬಿದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ (Resignation) ಸಲ್ಲಿಸುವ ಮೂಲಕ ಅಧಿಕಾರದಿಂದ ಕೆಳಗೆ ಇಳಿದಿದ್ದಾರೆ.

ರಾಜೀನಾಮೆ ಸಲ್ಲಿಕೆಗೂ ಮುನ್ನ ಇಂದು ಬೆಳಿಗ್ಗೆ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಸಚಿವರ ಕೊನೆಯ ‘ಬ್ರೇಕ್‌ಫಾಸ್ಟ್‌ ಮೀಟಿಂಗ್’ ನಡೆಯಿತು. ಕಾವೇರಿ ನಿವಾಸದ ಅಂಗಳ ಸದಾ ಜನಸಾಗರದಿಂದ, ಅಧಿಕಾರದ ಗಿಜಿಗುಡುವಿಕೆಯಿಂದ ತುಂಬಿರುತ್ತಿತ್ತು. ಆದರೆ ಇಂದು ಅಲ್ಲಿ ಆವರಿಸಿದ್ದ ಮೌನವೇ ಬೇರೆಯಾಗಿತ್ತು.

ಉಪಹಾರ ಸಭೆಯಲ್ಲಿ ಭಾಗಿಯಾಗಿದ್ದ ಪ್ರಮುಖ ಮಂತ್ರಿಗಳು ಮತ್ತು ಆಪ್ತ ನಾಯಕರು ಸಿದ್ದರಾಮಯ್ಯ ಅವರ ಸುದೀರ್ಘ ಹೋರಾಟದ ಪಯಣವನ್ನು ನೆನೆದು ಭಾವುಕರಾದರು. ಹಲವು ಸಚಿವರ ಕಣ್ಣಾಲಿಗಳು ತೇವಗೊಂಡಿದ್ದವು. ಸಹೋದ್ಯೋಗಿ ಮಂತ್ರಿಗಳಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ ಮಧ್ಯಾಹ್ನ ಭೋಜನ ಬಳಿಕ ರಾಜೀನಾಮೆ ಪತ್ರ ಹಿಡಿದು ಕಾರಿನಲ್ಲಿ ಲೋಕಭವನದತ್ತ(ರಾಜಭವನ) ತೆರಳಿದರು.