


ಲಕ್ನೋ: ಚಂಡಮಾರುತಕ್ಕೆ ಸಿಕ್ಕಿ ಬೆಟ್ಟಾ ನದಿಯ ಮೇಲೆ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು (Hamirpur Bridge Collapse) 6 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಹಮೀರ್‌ಪುರದಲ್ಲಿ ನಡೆದಿದೆ.
ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗಲೆಂದು ನಿರ್ಮಿಸಿದ್ದ ಸೇತುವೆಯೇ (Bridge) ಈಗ ಜನರ ಜೀವಕ್ಕೆ ಸಂಚಕಾರ ತಂದಿದೆ. ಘಟನೆಯಲ್ಲಿ ಈವರೆಗೆ 6 ಕಾರ್ಮಿಕರು ಸಾವನ್ನಪ್ಪಿದ್ದು, ಇನ್ನೂ ಅನೇಕರು ಅವಶೇಷಗಳ ಅಡಿಯಲ್ಲೇ ಸಿಲುಕಿರುವ ಶಂಕೆ ಇದೆ. ಹೀಗಾಗಿ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.


ಸ್ಥಳೀಯ ಆಡಳಿತ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಆಗಮಿಸಿದ್ದು, ಅವಶೇಷಗಳ ಅಡಿಯಲ್ಲಿ ಸಿಲುಕಿರುವವರ ರಕ್ಷಣೆಗೆ ಬೃಹತ್ ಕಾರ್ಯಾಚರಣೆ ಕೈಗೊಂಡಿವೆ.
