Tamanvi Silk
Darbe Salon
Mahalingeshwara Car Air Condition

ಕಾರವಾರ: ಹೈದರಾಬಾದ್‌ನಿಂದ (Hyderabad) ಬಳ್ಳಾರಿ ಮೂಲಕ ಗೋವಾಗೆ ತೆರಳುತ್ತಿದ್ದ ಸೀಬರ್ಡ್ ಕಂಪನಿಯ ಬಸ್ (Seabird Bus) ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಓರ್ವ ಸಾವನ್ನಪ್ಪಿದ್ದು, 21 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಅಂಕೋಲ (Ankola) ತಾಲೂಕಿನ ರಾಷ್ಟ್ರೀಯ ಹೆದ್ದಾರಿ 52ರ ಕಂಚಿನಬಾಗಿಲು-ಅಗಸೂರು ನಡುವೆ ನಡೆದಿದೆ.

Out Look Fashion

ಬಸ್ಸಿನಲ್ಲಿ ಒಟ್ಟು 36 ಜನ ಪ್ರಯಾಣಿಕರಿದ್ದರು. ಈ ಪೈಕಿ ಇದರಲ್ಲಿ 21 ಜನರಿಗೆ ಗಾಯವಾಗಿದ್ದು ಆರು ಜನರಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡವರನ್ನು ಅಂಕೋಲದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ನಂತರ ಕಾರವಾರದ ಕ್ರಿಮ್ಸ್ಗೆ ರವಾನೆ ಮಾಡಲಾಗಿದೆ. ವೇಗವಾಗಿ ಬರುತಿದ್ದ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಯಲ್ಲಿ ಪಲ್ಟಿಯಾಗಿ ಅಡ್ಡ ಬಿದ್ದಿದೆ.ಈ ಸಂದರ್ಭದಲ್ಲಿ ಹೈದರಾಬಾದ್ ಮೂಲದ ಶರಣಯ್ಯ (45) ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ.

Jaya Refrigeration and Air Condition

ಬಸ್ಸಿನಲ್ಲಿದ್ದ ಬಹುತೇಕ ಪ್ರಯಾಣಿಕರು ಹೈದರಾಬಾದ್ ಹಾಗೂ ಬಳ್ಳಾರಿ ಮೂಲದವರಾಗಿದ್ದಾರೆ. ಇನ್ನು ಹೆದ್ದಾರಿಯಲ್ಲಿ ಬಸ್ ಬಿದ್ದ ಪರಿಣಾಮ ಕೆಲವು ಸಮಯ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಪೊಲೀಸರು ಹಾಗೂ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿ ಕ್ರೇನ್ ಮೂಲಕ ಬಸ್ ಅನ್ನು ಮೇಲೆತ್ತಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. ಘಟನೆ ಸಂಬAಧ ಅಂಕೋಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.