Tamanvi Silk
Darbe Salon
Mahalingeshwara Car Air Condition

ಅಹಮದಾಬಾದ್: ಬೌಲರ್‌ಗಳ ಶಿಸ್ತುಬದ್ಧ ಮಾರಕ ದಾಳಿ ಹಾಗೂ ರನ್‌ ಮಷಿನ್ ವಿರಾಟ್ ಕೊಹ್ಲಿ (Virat Kohli) ಅವರ ಜವಾಬ್ದಾರಿಯುತ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಇತಿಹಾಸ ನಿರ್ಮಿಸಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ತಂಡವನ್ನು ಧೂಳೀಪಟ ಮಾಡಿದ ಆರ್‌ಸಿಬಿ ಸತತ ಎರಡನೇ ಬಾರಿಗೆ ಚಾಂಪಿಯನ್‌ ಪಟ್ಟ ಅಲಂಕರಿಸಿದೆ.

Out Look Fashion

ಐಪಿಎಲ್ ಇತಿಹಾಸದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ಮುಂಬೈ ಇಂಡಿಯನ್ಸ್ (MI) ನಂತರ ಸತತ ಎರಡು ಬಾರಿ ಟ್ರೋಫಿ ಗೆದ್ದ ಮೂರನೇ ತಂಡ ಎಂಬ ಅಪ್ರತಿಮ ಕೀರ್ತಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭಾಜನವಾಗಿದೆ. 5 ವಿಕೆಟ್‌ಗಳ ಐತಿಹಾಸಿಕ ಗೆಲುವಿನ ಬೆನ್ನಲ್ಲೇ ವಿಶ್ವದಾದ್ಯಂತ ಇರುವ ಕೋಟ್ಯಂತರ ಆರ್‌ಸಿಬಿ ಅಭಿಮಾನಿಗಳಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿದ್ದು, “ಈ ಸಲವೂ ಕಪ್ ನಮ್ದೇ” ಎಂಬ ಘೋಷಣೆ ಎಲ್ಲೆಡೆ ಮೊಳಗುತ್ತಿದೆ.

Jaya Refrigeration and Air Condition

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟನ್ಸ್ (GT), ಆರ್‌ಸಿಬಿ ಬೌಲರ್‌ಗಳ ಶಿಸ್ತುಬದ್ಧ ದಾಳಿಗೆ ನಲುಗಿ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 155 ರನ್‌ಗಳ ಸಾಧಾರಣ ಮೊತ್ತ ಕಲೆ ಹಾಕಿತು. ಈ ಮೊತ್ತವನ್ನು ಬೆನ್ನಟ್ಟಿದ ಆರ್‌ಸಿಬಿ ಇನ್ನು 12 ಎಸೆತ ಬಾಕಿ ಇರುವಂತೆಯೇ 5 ವಿಕೆಟ್‌ ನಷ್ಟಕ್ಕೆ 161 ರನ್‌ ಹೊಡೆದು ಜಯಗಳಿಸಿತು.