


ಶಿಮ್ಲಾ: ಹಿಮಾಚಲ ಪ್ರದೇಶದ ನಾಲ್ಕು ಪುರಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು(Himachal Municipal Poll Results) ಬಿಜೆಪಿ ಮೂರು ಕಡೆ ಗೆಲುವು ಸಾಧಿಸಿದೆ. ಆಡಳಿತಾರೂಢ ಕಾಂಗ್ರೆಸ್ ಕೇವಲ ಪಾಲಂಪುರ್ ಪುರಸಭೆಯನ್ನು ಗೆದ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ.


ಸೋಲನ್, ಮಂಡಿ ಹಾಗೂ ಧರ್ಮಶಾಲಾ ಮಹಾನಗರ ಪಾಲಿಕೆಗಳಲ್ಲಿ ಬಿಜೆಪಿ(BJP) ಸ್ಪಷ್ಟ ಬಹುಮತ ಪಡೆದಿದೆ. ಪಾಲಂಪುರ್ ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ.17 ಸದಸ್ಯರ ಸೋಲನ್ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ 10 ವಾರ್ಡ್ಗಳಲ್ಲಿ ಗೆದ್ದಿದೆ. ಕಾಂಗ್ರೆಸ್ 6 ವಾರ್ಡ್‌ಗಳಲ್ಲಿ ಜಯ ಸಾಧಿಸಿದ್ದು, ಒಂದು ಕಡೆ ಪಕ್ಷೇತರ ಅಭ್ಯರ್ಥಿ ಗೆದ್ದಿದ್ದಾರೆ. ಮಂಡಿಯ 14 ವಾರ್ಡ್‌ಗಳ ಪೈಕಿ ಬಿಜೆಪಿ 12, ಒಂದು ಕಡೆ ಕಾಂಗ್ರೆಸ್, ಮತ್ತೊಂದು ಸ್ಥಾನ ಪಕ್ಷೇತರ ಅಭ್ಯರ್ಥಿಗೆ ಲಭಿಸಿದೆ.

ಧರ್ಮಶಾಲಾ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ 17ರಲ್ಲಿ 11 ವಾರ್ಡ್‌ಗಳಲ್ಲಿ ಗೆದ್ದರೆ ಕಾಂಗ್ರೆಸ್ 5 ವಾರ್ಡ್‌ಗಳಲ್ಲಿ ಜಯಗಳಿಸಿದೆ. ಒಂದು ಸ್ಥಾನ ಪಕ್ಷೇತರ ಅಭ್ಯರ್ಥಿಗೆ ಸಿಕ್ಕಿದೆ. ಪಾಲಂಪುರ್ ಮಹಾನಗರ ಪಾಲಿಕೆಯ 15 ವಾರ್ಡ್‌ಗಳ ಪೈಕಿ 11 ರಲ್ಲಿ ಕಾಂಗ್ರೆಸ್, ಬಿಜೆಪಿ 4 ಕಡೆ ಜಯ ಸಾಧಿಸಿದೆ.
