Tamanvi Silk
Darbe Salon
Mahalingeshwara Car Air Condition
Screenshot

ಉಜಿರೆ: ಶಾಲೆಗೆ ತೆರಳಲು ಸಿದ್ಧತೆ ನಡೆಸುತ್ತಿದ್ದ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಉಜಿರೆಯ ಶಿವಾಜಿನಗರದ 5ನೇ ಅಡ್ಡರಸ್ತೆಯಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.

Out Look Fashion

ಖಾಸಗಿ ಶಾಲೆಯೊಂದರಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ, ಎಂದಿನಂತೆ ಶಾಲೆಗೆ ಹೊರಡುವ ಸಿದ್ಧತೆಯಲ್ಲಿದ್ದ ವೇಳೆ ಈ ಕೃತ್ಯ ಎಸಗಿರುವುದಾಗಿ ತಿಳಿದುಬಂದಿದೆ. ಘಟನೆಯಿಂದ ಕುಟುಂಬಸ್ಥರು ಹಾಗೂ ಸ್ಥಳೀಯರು ಆಘಾತಕ್ಕೊಳಗಾಗಿದ್ದಾರೆ.

Jaya Refrigeration and Air Condition

ಮೃತ ವಿದ್ಯಾರ್ಥಿನಿ ತಂದೆ ರಾಘವ ಆಚಾರ್ಯ ಹಾಗೂ ತಾಯಿ ಕಲಾವತಿ ಅವರನ್ನು ಅಗಲಿದ್ದಾಳೆ. ಆತ್ಮಹತ್ಯೆಗೆ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಸುದ್ದಿ ತಿಳಿದ ತಕ್ಷಣ ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾವಿನ ಹಿಂದಿನ ನಿಖರ ಕಾರಣ ಪತ್ತೆಹಚ್ಚಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.