Tamanvi Silk
Darbe Salon
Mahalingeshwara Car Air Condition

ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಬೆಂಗಳೂರಿನ ಲೋಕಭವನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಪ್ರಮಾಣವಚನ ಸ್ವೀಕರಿಸಿದರು.

Out Look Fashion

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಅವರಿಗೆ ರಾಜ್ಯಪಾಲರು ಪದ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು. ಸಮಾರಂಭದಲ್ಲಿ ಸಚಿವರು, ಶಾಸಕರು, ಗಣ್ಯರು ಹಾಗೂ ಸಾವಿರಾರು ಕಾರ್ಯಕರ್ತರು ಭಾಗವಹಿಸಿ ಶುಭ ಹಾರೈಸಿದರು.

Jaya Refrigeration and Air Condition

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಹಲವು ದಶಕಗಳ ರಾಜಕೀಯ ಅನುಭವ ಹೊಂದಿರುವ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ರಾಜ್ಯದ ಅಭಿವೃದ್ಧಿಗೆ ಹೊಸ ದಿಕ್ಕು ದೊರೆಯುವ ನಿರೀಕ್ಷೆ ವ್ಯಕ್ತವಾಗಿದೆ.

ಪ್ರಮಾಣವಚನ ಸ್ವೀಕಾರದ ಬಳಿಕ ಮಾತನಾಡಿದ ಅವರು, ಜನರ ಆಶೋತ್ತರಗಳಿಗೆ ತಕ್ಕಂತೆ ಆಡಳಿತ ನೀಡುವುದಾಗಿ ಹಾಗೂ ರಾಜ್ಯದ ಸಮಗ್ರ ಅಭಿವೃದ್ಧಿಗೆ ಬದ್ಧರಾಗಿರುವುದಾಗಿ ತಿಳಿಸಿದ್ದಾರೆ.