



ಬೆಂಗಳೂರು: ರಾಜ್ಯದ ಎಲ್ಲಾ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ನೂತನ ಸಿಎಂ ಡಿಕೆ ಶಿವಕುಮಾರ್ (DK Shivakumar) ಸಿಹಿ ಸುದ್ದಿ ಕೊಟ್ಟಿದ್ದಾರೆ.

ಅಧಿಕಾರ ಸ್ವೀಕರಿಸಿದ ಬಳಿಕ ವಿಧಾನಸೌಧದಲ್ಲಿಂದು ಮೊದಲ ಸುದ್ದಿಗೋಷ್ಠಿ ನಡೆಸಿದ ಅವರು, ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ಘೋಷಣೆ ಮಾಡಿದ್ದಾರೆ.

ಇಷ್ಟು ದಿನ ವಿದ್ಯಾರ್ಥಿನಿಯರಿಗೆ ಮಾತ್ರ ನೀಡುತ್ತಿದ್ದ ಬಸ್ ಪಾಸ್‌ಗಳನ್ನ ಶಾಲಾ ಬಾಲಕರು, ಕಾಲೇಜು ಯುವಕರಿಗೂ ವಿಸ್ತರಣೆ ಮಾಡಲು ನಿರ್ಧರಿಸಿದ್ದೇವೆ. ಆದ್ರೆ ಅವರು ವಿದ್ಯಾರ್ಥಿಗಳು ಅಂತ ತಿಳಿಯೋಕೆ ಅರ್ಜಿ ಸಲ್ಲಿಕೆ ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆ
