Tamanvi Silk
Darbe Salon
Mahalingeshwara Car Air Condition

ಪುತ್ತೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್‌ ಅವರನ್ನು ಪುತ್ತೂರು ಶಾಸಕ ಅಶೋಕ್ ರೈ ಅಭಿನಂದಿಸಿದರು.

Out Look Fashion

ಈ ಸಂದರ್ಭದಲ್ಲಿ ಬಿ.ಕೆ. ಹರಿಪ್ರಸಾದ್ ಅವರ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ಸಂಘಟನೆ ಇನ್ನಷ್ಟು ಬಲಿಷ್ಠವಾಗಲಿದ್ದು, ಪಕ್ಷದ ಕಾರ್ಯಕರ್ತರಿಗೆ ಹೊಸ ಉತ್ಸಾಹ ಸಿಗಲಿದೆ ಎಂಬ ವಿಶ್ವಾಸವನ್ನು ಶಾಸಕ ಅಶೋಕ್ ರೈ ವ್ಯಕ್ತಪಡಿಸಿದರು.

Jaya Refrigeration and Air Condition

ರಾಜ್ಯ ರಾಜಕೀಯದಲ್ಲಿ ದೀರ್ಘ ಅನುಭವ ಹೊಂದಿರುವ ಹರಿಪ್ರಸಾದ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ದೊರೆತಿರುವುದು ಪಕ್ಷಕ್ಕೆ ಹೊಸ ಚೈತನ್ಯ ನೀಡಲಿದ್ದು, ಅವರ ಮುಂದಿನ ಕಾರ್ಯಚಟುವಟಿಕೆಗಳಿಗೆ ಶುಭ ಹಾರೈಸಿದರು.

ಈ ವೇಳೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.