Tamanvi Silk
Darbe Salon
Mahalingeshwara Car Air Condition
Screenshot

ಲಿಟ್ಲ್ ಫ್ಲವರ್ ಶಾಲೆ ದರ್ಬೆ ಪುತ್ತೂರು ಇದರ 99ನೇ ವರ್ಷದ ಶಾಲಾ ಪ್ರಾರಂಬೊತ್ಸವ ಕಾರ್ಯಕ್ರಮ ಶಾಲಾ ಸಂಚಾಲಕಿ ವಂದನೀಯ ಭಗಿನಿ ಪ್ರಶಾಂತಿ ಬಿ ಎಸ್ ಅಧ್ಯಕ್ಷತೆಯಲ್ಲಿ ನಡೆಯಿತು. ಆರಂಭದಲ್ಲಿ 2026- 2027 ನೇ ಶೈಕ್ಷಣಿಕ ವರ್ಷದಲ್ಲಿ ದಾಖಲಾದ ನೂತನ ವಿದ್ಯಾರ್ಥಿಗಳಿಗೆ ಹೂ ನೀಡಿ ಸ್ವಾಗತಿಸಿ,ವಾದ್ಯ ಘೋಷದ ಮೂಲಕ ಸಭಾಂಗಣಕ್ಕೆ ಕರೆತರಲಾಯಿತು.

Out Look Fashion

ಬಳಿಕ ನವ ಶೈಕ್ಷಣಿಕ ವರ್ಷದ ಪಠ್ಯ ಪುಸ್ತಕ ವಿತರಿಸಲಾಯಿತು.ವೇದಿಕೆಯಲ್ಲಿ ಶಾಲಾ ರಕ್ಷಕ ಶಿಕ್ಷಕ ಸಂಫದ ಉಪಾಧ್ಯಕ್ಷರಾದ ಶ್ರೀ ವಿನಯ ಸುವರ್ಣ, ನಿಕಟ ಪೂರ್ವ ಉಪಾಧ್ಯಕ್ಷರಾದ ಶ್ರೀ ರಾಮಚಂದ್ರ ಭಟ್, ಹಿರಿಯ ವಿದ್ಯಾರ್ಥಿಗಳಾದ ಹಮೀದ್ ಕೂರ್ನಡ್ಕ, ಅಶ್ರಫ್ ಮುಕ್ವೆ, ರಕ್ಷಕ ಶಿಕ್ಷಕ ಸಂಘದ ಸದಸ್ಯರಾದ ಶ್ರೀ ಜನಾರ್ಧನ ಪೂಜಾರಿ, ಶ್ರೀಮತಿ ರೇಣುಕಾ ಚಂದ್ರಶೇಖರ್ ಉಪಸ್ಥಿತರಿದ್ದರು.

Jaya Refrigeration and Air Condition


ಶಾಲಾ ಮುಖ್ಯ ಶಿಕ್ಷಕಿ ಭಗಿನಿ ಐರಿನ್ ವೇಗಸ್ ಸ್ವಾಗತಿಸಿ, ಶಿಕ್ಷಕಿ ವಿಲ್ಮಾ ಫೆರ್ನಾಂಡಿಸ್ ವಂದಿಸಿದರು.ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್ ಕಾರ್ಯಕ್ರಮ ನಿರೂಪಿಸಿದರು.