


ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್(Yogi Adityanath) ಸರ್ಕಾರದ ‘ಜಿರೋ ಟಾಲರೆನ್ಸ್’ ನೀತಿ ಹಾಗೂ ಕಠಿಣ ಪೊಲೀಸ್ ಕ್ರಮಗಳ ಭಯ ಅಪರಾಧ ಲೋಕವನ್ನು ಯಾವ ಮಟ್ಟಿಗೆ ನಡುಗಿಸಿದೆ ಎಂಬುದಕ್ಕೆ ಗಾಜಿಯಾಬಾದ್‌ನಲ್ಲಿ ನಡೆದ ಈ ನಾಟಕೀಯ ಘಟನೆಯೇ ಸಾಕ್ಷಿ. ಇತ್ತೀಚೆಗೆ ಜಿಲ್ಲೆಯ ಸುಮಾರು 150ಕ್ಕೂ ಹೆಚ್ಚು ರೌಡಿಶೀಟರ್‌ಗಳು “ಯೋಗಿ ಜೀ ನಮ್ಮನ್ನು ಕ್ಷಮಿಸಿ” ಎಂಬ ಪೋಸ್ಟರ್‌ಗಳನ್ನು ಹಿಡಿದು ಬಹಿರಂಗವಾಗಿಯೇ ಪೊಲೀಸರ ಮುಂದೆ ಶರಣಾಗಿದ್ದಾರೆ.


ಗಾಜಿಯಾಬಾದ್‌ನಲ್ಲಿ ಇತ್ತೀಚೆಗೆ ಹದಿಹರೆಯದ ಯುವಕನೊಬ್ಬನ ಭೀಕರ ಕೊಲೆ ನಡೆದಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಅಪರಾಧಿಗಳ ಸದ್ದಡಗಿಸಲು ‘ಆಪರೇಷನ್ ಕ್ಲೀನ್ ಸ್ವೀಪ್’ (Operation Clean Sweep) ಎಂಬ ವಿಶೇಷ ಪರಿಶೀಲನಾ ಅಭಿಯಾನವನ್ನು ಕೈಗೊಂಡಿದ್ದರು. ಟ್ರಾನ್ಸ್-ಹಿಂದನ್ ವಲಯದ ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್ (DCP) ಧವಲ್ ಜೈಸ್ವಾಲ್ ನೇತೃತ್ವದಲ್ಲಿ ಜಿಲ್ಲೆಯ ಹಳೆಯ ಅಪರಾಧಿಗಳ ಪತ್ತೆ ಕಾರ್ಯ ನಡೆಸಲಾಗಿತ್ತು.

ಪೊಲೀಸರ ಅಭಿಯಾನದ ಭಾಗವಾಗಿ ಪೊಲೀಸರು ಇತ್ತೀಚೆಗೆ ಸುಮಾರು 150 ರೌಡಿಶೀಟರ್‌ಗಳನ್ನು (Rowdy Sheeter) ಸಾಮಾನ್ಯ ವಿಚಾರಣೆಗಾಗಿ ಸ್ಥಳೀಯ ಪೊಲೀಸ್ ಠಾಣೆಗಳಿಗೆ ಕರೆಯಿಸಿದ್ದರು. ಆದರೆ ಯೋಗಿ ಸರ್ಕಾರದ ಬುಲ್ಡೋಜರ್ ಮತ್ತು ಎನ್‌ಕೌಂಟರ್ ಕ್ರಮಗಳ ಭೀತಿಯಲ್ಲಿದ್ದ ಅಪರಾಧಿಗಳು, ತಾವಾಗಿಯೇ ಸ್ವಯಂಪ್ರೇರಿತರಾಗಿ ಕೈಯಿಂದ ಬರೆದ ಪೋಸ್ಟರ್‌ಗಳನ್ನು ಹಿಡಿದುಕೊಂಡು ಠಾಣೆಗೆ ಬಂದಿದ್ದರು.
