Tamanvi Silk
Darbe Salon
Mahalingeshwara Car Air Condition

ಆನೇಕಲ್: ವಿಧಾನ ಪರಿಷತ್ ಮಾಜಿ ಸದಸ್ಯ ದಯಾನಂದ ರೆಡ್ಡಿ (Dayanand Reddy) ಅವರನ್ನು ಅಪಹರಿಸಿ 3 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Out Look Fashion

ಕೇರಳ ಮೂಲದ ಪ್ರವೀಣ್, ರೋಮಿಯೋ ಮಾರ್ಟಿನ್, ಅಶಿಕ್ ಮತ್ತು ಆದರ್ಶ್ ಎಂಬ ನಾಲ್ವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.

Jaya Refrigeration and Air Condition

ಈ ಸಂಬಂಧ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಬಳಿಕ ಪ್ರಕರಣವನ್ನು ಸೂರ್ಯನಗರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿತ್ತು. ತನಿಖೆ ನಡೆಸಿದ ಪೊಲೀಸರಿಗೆ ಕಿಡ್ನಾಪ್ ಮಾಡಿ ಕರೆದೊಯ್ಯುತ್ತಿರುವ ಸಿಸಿಟಿವಿ ದೃಶ್ಯ ಲಭ್ಯವಾಗಿದೆ. ಸದ್ಯ ಪೊಲೀಸರು ನಾಲ್ವರನ್ನು ಆರೋಪಿಗಳನ್ನು ಬಂಧಿಸಿ, ಕಿಡ್ನಾಪ್‌ಗೆ ಬಳಸಿದ್ದ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸದ್ಯ ಆರೋಪಿಗಳ ವಿಚಾರಣೆ ನಡೆಯುತ್ತಿದೆ.