Tamanvi Silk
Darbe Salon
Mahalingeshwara Car Air Condition

ಡೆಹ್ರಾಡೂನ್: ಉತ್ತರಾಖಂಡದ (Uttarakhand) ಉತ್ತರಕಾಶಿಯ ದಯಾರ ಬುಗ್ಯಾಲ್‌ನಲ್ಲಿ ಟ್ರೆಕ್ಕಿಂಗ್ (Trekking) ವೇಳೆ ನಾಪತ್ತೆಯಾಗಿದ್ದ ಎಂಬಿಎ ವಿದ್ಯಾರ್ಥಿನಿಯ (Student) ಸುಳಿವು ವಾರವಾದರೂ ಸಿಕ್ಕಿಲ್ಲ.

Out Look Fashion

ನೈನಿತಾಲ್ ನಿವಾಸಿ ಬಬಿತಾ ಪಾಂಡೆ ಉತ್ತರಾಖಂಡದ ಉಧಮ್ ಸಿಂಗ್ ನಗರದ ಹರ್ಮನ್‌ಪಾಲ್ ಸಿಂಗ್ ಮತ್ತು ಉತ್ತರ ಪ್ರದೇಶದ ಶಹಜಹಾನ್‌ಪುರದ ಹರ್ಮನ್‌ಪ್ರೀತ್ ಸಿಂಗ್ ಅವರೊಂದಿಗೆ ಉತ್ತರಕಾಶಿಗೆ ಟ್ರೆಕ್ಕಿಂಗ್‌ಗೆ ತೆರಳಿದ್ದರು. ಈ ವೇಳೆ ಅವರು ನಾಪತ್ತೆಯಾಗಿದ್ದರು. ಈ ಸಂಬಂಧ ಕುಟುಂಬಸ್ಥರು ದೂರು ನೀಡಿದ್ದು, ದೂರಿನ ಅನ್ವಯ ಯುವತಿಯ ಇಬ್ಬರು ಸ್ನೇಹಿತರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Jaya Refrigeration and Air Condition

ಮೂವರು ಮೇ 25 ರಂದು ಡೆಹ್ರಾಡೂನ್‌ಗೆ ತೆರಳಿದ್ದರು. ನಂತರ ಹರ್ಸಿಲ್, ಗಂಗೋತ್ರಿ ಮತ್ತು ಹತ್ತಿರದ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ್ದರು. ನಂತರ ಮೂವರು ಮೇ 28 ರಂದು ರೈಥಾಲ್ ಗ್ರಾಮಕ್ಕೆ ಹೋಗಿ ಅಲ್ಲಿಯೇ ಇದ್ದರು. ಅವರು ಕೊನೆಯದಾಗಿ ಓಡಾಡಿದ ದೃಶ್ಯ ರೈಥಾಲ್‌ನ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ ಎಂದು ಉತ್ತರಕಾಶಿ ಪೊಲೀಸ್ ವರಿಷ್ಠಾಧಿಕಾರಿ ಕಮಲೇಶ್ ಉಪಾಧ್ಯಾಯ ಮಾಹಿತಿ ನೀಡಿದ್ದಾರೆ.