Tamanvi Silk
Darbe Salon
Mahalingeshwara Car Air Condition

ನವದೆಹಲಿ/ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ರಾಷ್ಟ್ರೀಯ ಕಾಂಗ್ರೆಸ್ ಕೊನೆಗೂ ತನ್ನ ಅಭ್ಯರ್ಥಿಗಳ ಪಟ್ಟಿಯನ್ನ ಪ್ರಕಟ ಮಾಡಿದೆ.

Out Look Fashion

ರಾಜ್ಯಸಭಾ ಚುನಾವಣೆ ಕರ್ನಾಟಕದಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಮನ್ಸೂರ್ ಅಲಿಖಾನ್, ಪವನ್ ಖೇರಾ (Pawan Khera) ಮೂವರು ಸ್ಪರ್ಧಿಸುತ್ತಿದ್ದಾರೆ ಎಂದು ಎಐಸಿಸಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಮೂವರು ಅಭ್ಯರ್ಥಿಗಳು ಶುಕ್ರವಾರ (ಜೂ.5) ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

Jaya Refrigeration and Air Condition

ಇದರೊಂದಿಗೆ ಮಧ್ಯಪ್ರದೇಶದಿಂದ ಮೀನಾಕ್ಷಿ ನಟರಾಜನ್‌, ರಾಜಸ್ಥಾನದಿಂದ ನೀರಜ್ ಡಾಂಗಿ, ತಮಿಳುನಾಡಿನಿಂದ ಪ್ರವೀಣ್‌ ಚಕ್ರವರ್ತಿ ಹಾಗೂ ಜಾರ್ಖಂಡ್‌ನಿಂದ ಪ್ರಣವ್‌ ಝಾಃ ಅವರು ರಾಜ್ಯಸಭೆಗೆ ಸ್ಪರ್ಧಿಸುತ್ತಿದ್ದಾರೆ.3ನೇ ಸ್ಥಾನದ ಅಭ್ಯರ್ಥಿಗಾಗಿ ಭಾರೀ ಕಸರತ್ತು ನಡೆದಿತ್ತು. ಆಂಧ್ರದ ಮಾಜಿ ಸಿಎಂ ವೈ.ಎಸ್ ರಾಜಶೇಖರ ರೆಡ್ಡಿ ಪುತ್ರಿ ಹಾಗೂ ಆಂಧ್ರ ಕಾಂಗ್ರೆಸ್ ಅಧ್ಯಕ್ಷೆ ಶರ್ಮಿಳಾ ರೆಡ್ಡಿ ಹಾಗೂ ಪವನ್ ಖೇರಾ ಅವರ ಹೆಸರು ರೇಸ್‌ನಲ್ಲಿತ್ತು. ಆದ್ರೆ ಹೈಕಮಾಂಡ್‌ ಪವನ್‌ ಖೇರಾ ಅವರ ಹೆಸರನ್ನು ಅಂತಿಮಗೊಳಿಸಿದೆ.