



ಪುತ್ತೂರು, ಜೂ. 5: ಪುತ್ತೂರಿನ ವಿದ್ಯಾ ಸಂಸ್ಥೆಯೊಂದರಲ್ಲಿ ವ್ಯಾಸಂಗ ಮಾಡುತ್ತಿರುವ ಅಪ್ರಾಪ್ತ ವಿದ್ಯಾರ್ಥಿನಿಯೊಂದಿಗೆ ಬಲವಂತವಾಗಿ ಲೈಂಗಿಕ ಸಂಪರ್ಕ ನಡೆಸಿದ ಆರೋಪದಡಿ ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ತೀರ್ಥಾಕ್ಷ ಎಂಬ ಯುವಕನ ವಿರುದ್ಧ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಸಂತ್ರಸ್ತ ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ, ಆರೋಪಿಯ ವಿರುದ್ಧ ಫೋಕ್ಸೋ ಕಾಯ್ದೆಯ ವಿವಿಧ ಕಲಂಗಳು, ಭಾರತೀಯ ನ್ಯಾಯ ಸಂಹಿತೆ (BNS) ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ದೂರಿನ ಪ್ರಕಾರ, ಕಳೆದ ಫೆಬ್ರವರಿಯಲ್ಲಿ ನಡೆದ ನೇಮೋತ್ಸವದ ಸಂದರ್ಭದಲ್ಲಿ ಬಾಲಕಿಗೆ ಆರೋಪಿಯ ಪರಿಚಯವಾಗಿದ್ದು, ಬಳಿಕ ಇಬ್ಬರೂ ದೂರವಾಣಿ ಸಂಪರ್ಕದಲ್ಲಿದ್ದರು ಎನ್ನಲಾಗಿದೆ. ಆರೋಪಿ ಪ್ರೀತಿಯ ನೆಪದಲ್ಲಿ ಬಾಲಕಿಯನ್ನು ರಾತ್ರಿ ವೇಳೆ ಮನೆಯ ಹಿಂಭಾಗದ ಖಾಲಿ ಜಾಗಕ್ಕೆ ಕರೆಯುತ್ತಿದ್ದನೆಂದು ಆರೋಪಿಸಲಾಗಿದೆ.
ಮೂರನೇ ಬಾರಿ ಭೇಟಿಯಾದ ಸಂದರ್ಭ, ಬಾಲಕಿಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ದೈಹಿಕ ಸಂಪರ್ಕ ನಡೆಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಜೂನ್ 4ರ ರಾತ್ರಿ ಬಾಲಕಿ ಮನೆಯಿಂದ ಹೊರಗಿದ್ದ ವೇಳೆ ಮನೆಯವರು ಹುಡುಕಾಟ ನಡೆಸಿ, ಮನೆಯ ಸಮೀಪದ ಖಾಲಿ ಜಾಗದಲ್ಲಿ ಬಾಲಕಿ ಹಾಗೂ ಆರೋಪಿಯನ್ನು ಕಂಡು ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಇದು ಪೊಲೀಸ್ ದೂರಿನ ಆಧಾರದ ಮೇಲಿನ ಮಾಹಿತಿ. ಆರೋಪ ಸಾಬೀತಾಗುವವರೆಗೆ ಆರೋಪಿಯನ್ನು ಅಪರಾಧಿ ಎಂದು ಪರಿಗಣಿಸಲಾಗುವುದಿಲ್ಲ
