



ಬೆಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆಯಾದ ಬೆನ್ನಲ್ಲೇ ತೀವ್ರ ಅಸಮಾಧಾನ ಸ್ಫೋಟಗೊಂಡಿದೆ. ಹಿರಿಯ ನಾಯಕ ಹಾಗೂ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

“ಜಲಸಂಪನ್ಮೂಲ ಖಾತೆಗೆ ನನ್ನ ಮನಸ್ಸು ಒಪ್ಪುತ್ತಿಲ್ಲ. ಈ ಖಾತೆಯಿಂದ ನನಗೆ ತೃಪ್ತಿ ಇಲ್ಲ,” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿರುವುದಾಗಿ ತಿಳಿದುಬಂದಿದೆ. ಖಾತೆ ಹಂಚಿಕೆ ಬಳಿಕ ಆಡಳಿತ ಪಕ್ಷದ ಒಳಗೆ ಭಿನ್ನಮತಗಳು ಮೇಲ್ಮೈಗೆ ಬರುತ್ತಿರುವ ಸೂಚನೆಗಳು ಕಾಣಿಸುತ್ತಿವೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

