Tamanvi Silk
Darbe Salon
Mahalingeshwara Car Air Condition

ತಿರುವನಂತಪುರಂ: ಕೇರಳದಲ್ಲಿ ಭರಪೂರ ಗ್ಯಾರಂಟಿ ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ (Congress) ನೇತೃತ್ವದ ಯುಡಿಎಫ್ (UDF) ಸರ್ಕಾರಕ್ಕೆ ಈಗ ರಾಜ್ಯದ ಆರ್ಥಿಕ ಪರಿಸ್ಥಿತಿ ಅತಿದೊಡ್ಡ ಸವಾಲಾಗಿ ಪರಿಣಮಿಸಿದೆ.

Out Look Fashion

ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರೂ ಆಗಿರುವ ವಿ.ಡಿ. ಸತೀಶನ್(V. D. Satheesan) ಅವರು ವಿಧಾನಸಭೆಯಲ್ಲಿ ಮಂಡಿಸಿರುವ ಶ್ವೇತಪತ್ರ (White Paper) ರಾಜ್ಯದ ಭೀಕರ ಆರ್ಥಿಕ ದಿವಾಳಿತನವನ್ನು ಬಿಚ್ಚಿಟ್ಟಿದ್ದು, ಕೇರಳ ಬರೋಬ್ಬರಿ 5.07 ಲಕ್ಷ ಕೋಟಿ ರೂಪಾಯಿಗಳ ಸಾಲದ ಸುಳಿಗೆ ಸಿಲುಕಿರುವುದು ಅಧಿಕೃತವಾಗಿ ಬಹಿರಂಗವಾಗಿದೆ.

Jaya Refrigeration and Air Condition

ಹಿಂದಿನ ಪಿಣರಾಯಿ ವಿಜಯನ್ ನೇತೃತ್ವದ ಎಲ್‌ಡಿಎಫ್ (LDF) ಸರ್ಕಾರದ ಅವೈಜ್ಞಾನಿಕ ಆಡಳಿತವೇ ಈ ದುಸ್ಥಿತಿಗೆ ಕಾರಣ ಎಂದು ಶ್ವೇತಪತ್ರದಲ್ಲಿ ದೂರಲಾಗಿದೆ. ಮಾಜಿ ಕ್ಯಾಬಿನೆಟ್ ಕಾರ್ಯದರ್ಶಿ ಕೆ.ಎಂ. ಚಂದ್ರಶೇಖರ್ ನೇತೃತ್ವದ ಸಮಿತಿ ಈ ವರದಿಯನ್ನು ಸಿದ್ಧಪಡಿಸಿದೆ.