



ಮಾಣಿ : ಮಂಗಳೂರು-ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಅಳಿರಾ ಎಂಬಲ್ಲಿ ಕಾರು ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ದಂಪತಿ ಪ್ರಾಣಾಪಾಯದಿಂದ ಪಾರಾದ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿದ ಮಾರುತಿ 800 ಕಾರು ರಸ್ತೆ ಬದಿಯ ಚರಂಡಿಗೆ ಪಲ್ಟಿಯಾಗಿ ಬಿದ್ದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಅದೃಷ್ಟವಶಾತ್ ಗಂಭೀರ ಅಪಾಯದಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳೊಂದಿಗೆ ಬದುಕುಳಿದಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತದಿಂದ ಕಾರಿಗೆ ಹಾನಿಯಾಗಿದೆ

