Tamanvi Silk
Darbe Salon
Mahalingeshwara Car Air Condition

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆ ತನ್ನ ಅಬ್ಬರವನ್ನು ಮುಂದುವರಿಸಿದ್ದು, ಮಂಗಳೂರು ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಭಾರೀ ಮಳೆಯಾಗಿದೆ.

Out Look Fashion

ಕಳೆದ ಕೆಲ ಗಂಟೆಗಳ ಕಾಲ ಸುರಿದ ಧಾರಾಕಾರ ಮಳೆಯಿಂದ ಮಂಗಳೂರು ನಗರದ ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ರಸ್ತೆಗಳಲ್ಲಿ ನೀರು ನಿಂತ ಪರಿಣಾಮ ವಾಹನ ಸವಾರರು ಹಾಗೂ ಸಾರ್ವಜನಿಕರು ಸಂಚಾರಕ್ಕೆ ತೊಂದರೆ ಅನುಭವಿಸಿದರು.

Jaya Refrigeration and Air Condition

ನಗರದ ಕೆಲವು ವಸತಿ ಪ್ರದೇಶಗಳು ಮತ್ತು ವ್ಯಾಪಾರ ಕೇಂದ್ರಗಳಿಗೂ ಮಳೆ ನೀರು ನುಗ್ಗಿದ್ದು, ಸ್ಥಳೀಯ ನಿವಾಸಿಗಳು ಸಂಕಷ್ಟ ಎದುರಿಸುವಂತಾಯಿತು. ಒಳಚರಂಡಿಗಳು ತುಂಬಿ ಹರಿದ ಪರಿಣಾಮ ಹಲವು ಪ್ರದೇಶಗಳಲ್ಲಿ ನೀರು ರಸ್ತೆಗಳ ಮೇಲೆ ಹರಿಯಿತು.

ಹವಾಮಾನ ಇಲಾಖೆ ಮುಂದಿನ ಕೆಲವು ದಿನಗಳ ಕಾಲ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದ್ದು, ಮೀನುಗಾರರು ಹಾಗೂ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.