Tamanvi Silk
Darbe Salon
Mahalingeshwara Car Air Condition

ಉಡುಪಿ/ಮಂಗಳೂರು: ನಿನ್ನೆಯಷ್ಟೇ ಕೇರಳಕ್ಕೆ ಮುಂಗಾರು ಮಾರುತ ಪ್ರವೇಶಿಸಿರುವ ಬೆನ್ನಲ್ಲೇ ಕರ್ನಾಟಕದ ಕರಾವಳಿ ಭಾಗಗಳಲ್ಲೂ ಮಳೆಯ ಚಟುವಟಿಕೆ ಹೆಚ್ಚಾಗಿದೆ. ಉಡುಪಿ, ಮಂಗಳೂರು ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆಯಾಗುತ್ತಿದೆ.

Out Look Fashion

ಕೇರಳಕ್ಕೆ ಮುಂಗಾರು ಆಗಮಿಸಿದ ಬಳಿಕ ಒಂದೆರಡು ದಿನಗಳಲ್ಲಿ ಕರ್ನಾಟಕದಲ್ಲೂ ಮಳೆ ಆರಂಭವಾಗುವುದು ಸಾಮಾನ್ಯ. ಅದರಂತೆ ಕರಾವಳಿ ಜಿಲ್ಲೆಗಳಲ್ಲಿ ಇಂದು ಮಳೆಯ ವಾತಾವರಣ ಕಂಡುಬಂದಿದೆ.ಮಳೆ ಹಿನ್ನೆಲೆಯಲ್ಲಿ ನಗರ ಮತ್ತು ಗ್ರಾಮೀಣ ಭಾಗಗಳ ಕಾಲುವೆ ಹಾಗೂ ಚರಂಡಿಗಳ ಸ್ವಚ್ಛತೆಗೆ ಜಿಲ್ಲಾಧಿಕಾರಿ ಸ್ವರೂಪ್ ಟಿ.ಕೆ. ಸೂಚನೆ ನೀಡಿದ್ದಾರೆ. ಪ್ರಕೃತಿ ವಿಕೋಪ ಎದುರಿಸಲು ಅಗ್ನಿಶಾಮಕ ದಳ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸಜ್ಜಾಗಿರಬೇಕು ಎಂದು ಸೂಚಿಸಲಾಗಿದೆ. ಇದೇ ವೇಳೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. 

Jaya Refrigeration and Air Condition