Tamanvi Silk
Darbe Salon
Mahalingeshwara Car Air Condition

ಮುಂಬೈ: ಜೂನ್ 13ರಿಂದ ಮಲ್ಲನ್‌ಪುರದಲ್ಲಿ ಆರಂಭವಾಗಲಿರುವ ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಹಾಗೂ 3 ಪಂದ್ಯಗಳ ಏಕದಿನ ಸರಣಿಗೆ ಸಜ್ಜಾಗುತ್ತಿರುವ ಭಾರತ ಕ್ರಿಕೆಟ್ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ಸ್ನಾಯು ಸೆಳೆತದಿಂದಾಗಿ ಈಗಾಗಲೇ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಸರಣಿಯಿಂದ ಹೊರಬಿದ್ದ ಬೆನ್ನಲ್ಲೇ ಈಗ ನಾಯಕ ರೋಹಿತ್ ಶರ್ಮಾ ಹೊರ ಬೀಳುತ್ತಾರಾ ಎಂಬ ಪ್ರಶ್ನೆ ಎದುರಾಗಿದೆ.

Out Look Fashion

ಇತ್ತೀಚೆಗೆ ಮುಕ್ತಾಯಗೊಂಡ ಐಪಿಎಲ್ ಟೂರ್ನಿಯಲ್ಲಿ ರೋಹಿತ್ ಶರ್ಮಾ ಗಾಯಕ್ಕೆ ತುತ್ತಾಗಿದ್ದರು. ಈ ಹಿನ್ನೆಲೆಯಲ್ಲಿ ಅಫ್ಘಾನಿಸ್ತಾನ ಸರಣಿಗೂ ಮುನ್ನ ಬೆಂಗಳೂರಿನ ಸೆಂಟರ್ ಆಫ್ ಎಕ್ಸಲೆನ್ಸ್ ಗೆ ತೆರಳಿ ಕಡ್ಡಾಯವಾಗಿ ಫಿಟ್‌ನೆಸ್ ಪರೀಕ್ಷೆಗೆ ಒಳಗಾಗುವಂತೆ ಬಿಸಿಸಿಐ ಸೂಚಿಸಿತ್ತು. ಆದರೆ ರೋಹಿತ್ ಶರ್ಮಾ ಬೆಂಗಳೂರಿಗೆ ಬರುವ ಬದಲು ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಅನ್ನು ಸಂಪರ್ಕಿಸಿದ್ದಾರೆ.

Jaya Refrigeration and Air Condition

ಜೂನ್ 8 ಮತ್ತು 9 ರಂದು ಮೊಹಾಲಿಯ ಐ.ಎಸ್. ಬಿಂದ್ರಾ ಕ್ರೀಡಾಂಗಣದಲ್ಲಿ ತಾವು ನೇರವಾಗಿ ಅಭ್ಯಾಸ ನಡೆಸುವುದಾಗಿ ಅವರು ತಿಳಿಸಿದ್ದಾರೆ. ಬಿಸಿಸಿಐ (BCCI) ನಿಯಮದಂತೆ ಫಿಟ್‌ನೆಸ್ ಟೆಸ್ಟ್ ಪಾಸ್ ಮಾಡದ ಆಟಗಾರರನ್ನು ತಂಡಕ್ಕೆ ಆಯ್ಕೆ ಮಾಡುವುದು ಕಷ್ಟಸಾಧ್ಯವಾಗಿರುವುದರಿಂದ ಅಫ್ಘಾನ್ ವಿರುದ್ಧದ ಸರಣಿಯಲ್ಲಿ ಹಿಟ್‌ಮ್ಯಾನ್ ಕಣಕ್ಕಿಳಿಯುವುದು ಅನುಮಾನ ಎನ್ನಲಾಗುತ್ತಿದೆ.