



ಪುತ್ತೂರು, ಜೂನ್ 5: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಪುತ್ತೂರು ಬಿಜೆಪಿ ನಗರ ಮಂಡಲದ ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಭಾಗವಹಿಸಿ ಗಿಡ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಮಹತ್ವವನ್ನು ಸಾರಿದರು. ಪರಿಸರ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದ್ದು, ಮುಂದಿನ ಪೀಳಿಗೆಗೆ ಹಸಿರು ಪರಿಸರವನ್ನು ಉಳಿಸಿಕೊಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ನಗರ ಮಂಡಲದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದು, ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಿದರು. ಕಾರ್ಯಕ್ರಮದ ಅಂಗವಾಗಿ ಗಿಡ ನೆಡುವ ಕಾರ್ಯವನ್ನು ಕೂಡ ನಡೆಸಲಾಯಿತು.
ವಿಶ್ವ ಪರಿಸರ ದಿನದ ಸಂದೇಶವನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ನಡೆದ ಈ ಕಾರ್ಯಕ್ರಮದಲ್ಲಿ ನಗರ ಮಂಡಲ ಅಧ್ಯಕ್ಷರಾದ ಶಿವಕುಮಾರ್ ಕಲ್ಲಿಮಾರ್, ಪ್ರಧಾನ ಕಾರ್ಯದರ್ಶಿ ಶಶಿಧರ್ ನಾಯಕ್, ಜಿಲ್ಲಾ ಕಾರ್ಯದರ್ಶಿ ವಿದ್ಯಾ ಗೌರಿ, ಸಂತೋಷ್ ಕುಮಾರ್ ರೈ ಕೈಕಾರ, ದೀಕ್ಷಾ ಪೈ, ಜಯಲಕ್ಷ್ಮಿ ಶಗ್ರಿತ್ತಾಯ, ನಿರಂಜನ್ ಮಾನ್ಯ, ನಾಗೇಂದ್ರ ಬಾಳಿಗ, ಸುನಿತ್ ಭಟ್, ಮತ್ತು ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
