


ಬೆಳ್ತಂಗಡಿ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ವಾಸವಿದ್ದ 17 ವರ್ಷದ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಳಕಿಗೆ ಬಂದಿದೆ.


ಮೃತ ವಿದ್ಯಾರ್ಥಿನಿ ಬೆಳ್ತಂಗಡಿಯ ಖಾಸಗಿ ಕಾಲೇಜೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಕಾಲೇಜಿನ ಹಾಸ್ಟೆಲ್‌ನಲ್ಲಿ ಉಳಿದುಕೊಂಡಿದ್ದಳು. ಜೂನ್ 4ರಂದು ಮಧ್ಯಾಹ್ನ ಕಾಲೇಜಿನ ಪ್ರಾಂಶುಪಾಲರು ವಿದ್ಯಾರ್ಥಿನಿಯ ಪೋಷಕರಿಗೆ ಕರೆ ಮಾಡಿ, ಆಕೆ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವುದಾಗಿ ಮಾಹಿತಿ ನೀಡಿದ್ದಾರೆ.

ತಕ್ಷಣ ಸ್ಥಳಕ್ಕೆ ಆಗಮಿಸಿದ ಪೋಷಕರು ಮೃತದೇಹವನ್ನು ಗುರುತಿಸಿದ್ದಾರೆ. ಈ ಸಂಬಂಧ ಪೋಷಕರ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಯು.ಡಿ.ಆರ್. ಸಂಖ್ಯೆ 33/2026ರಡಿ ಪ್ರಕರಣ ದಾಖಲಾಗಿದ್ದು, ಬಿ.ಎನ್.ಎಸ್.ಎಸ್. ಕಲಂ 194ರ ಅನ್ವಯ ತನಿಖೆ ಕೈಗೊಳ್ಳಲಾಗಿದೆ.
ವಿದ್ಯಾರ್ಥಿನಿಯ ಆತ್ಮಹತ್ಯೆಗೆ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದ್ದು, ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.
