Tamanvi Silk
Darbe Salon
Mahalingeshwara Car Air Condition

ಬಂಟ್ವಾಳ: ಮಾದಕ ವಸ್ತು ಸಾಗಾಟದ ವಿರುದ್ಧ ಕಾರ್ಯಾಚರಣೆ ನಡೆಸಿದ ಬಂಟ್ವಾಳ ನಗರ ಪೊಲೀಸರು, ₹7.64 ಲಕ್ಷ ಮೌಲ್ಯದ ಎಂ.ಡಿ.ಎಂ.ಎ ಮಾದಕ ದ್ರವ್ಯವನ್ನು ವಶಪಡಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

Out Look Fashion

ಜೂನ್ 4ರಂದು ಸಂಜೆ ಮೆಲ್ಕಾರ್ ಫ್ಲೈಓವರ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ, ಪೊಲೀಸ್ ಉಪನಿರೀಕ್ಷಕ ಸಂದೀಪ್ ಕುಮಾರ್ ಶೆಟ್ಟಿ ನೇತೃತ್ವದ ತಂಡ ಕಾರೊಂದನ್ನು ತಡೆದು ಪರಿಶೀಲನೆ ನಡೆಸಿತು. ಈ ವೇಳೆ ಕಾರಿನಲ್ಲಿ ಮನೋದ್ರೇಕಕಾರಿ ವಸ್ತು ಸೇವನೆಗೆ ಬಳಸುವ ಸಾಧನ ಪತ್ತೆಯಾದ ಹಿನ್ನೆಲೆಯಲ್ಲಿ ಕಾರಿನಲ್ಲಿದ್ದ ಮೂವರನ್ನು ವಿಚಾರಣೆ ನಡೆಸಲಾಯಿತು.

Jaya Refrigeration and Air Condition

ವಿಚಾರಣೆ ವೇಳೆ ಆರೋಪಿಗಳು ಬಂಟ್ವಾಳ ಪುದು ನಿವಾಸಿ ಎ. ಜುಬೈರ್ (39), ಸಜಿಪ ಮುನ್ನೂರು ನಿವಾಸಿ ಮೊಹಮ್ಮದ್ ಸವಾದ್ (36) ಹಾಗೂ ಬಿ. ಮೂಡ ನಿವಾಸಿ ಬಿ.ಎಂ. ರಶೀದ್ ಅಲಿಯಾಸ್ ಮಾರಿಮುತ್ತು ಎಂದು ಗುರುತಿಸಲ್ಪಟ್ಟಿದ್ದಾರೆ.

ಆರೋಪಿಗಳು ಎಂ.ಡಿ.ಎಂ.ಎ ಮಾದಕ ದ್ರವ್ಯವನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಸಾಗಿಸುತ್ತಿದ್ದುದಾಗಿ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತಪಾಸಣೆಯಲ್ಲಿ ಆರೋಪಿಗಳ ಬಳಿ ಹಾಗೂ ಕಾರಿನಲ್ಲಿ ಒಟ್ಟು 76 ಗ್ರಾಂ 40 ಮಿಲಿಗ್ರಾಂ ಎಂ.ಡಿ.ಎಂ.ಎ ಪತ್ತೆಯಾಗಿದೆ.

ಪೊಲೀಸರು ಮಾದಕ ದ್ರವ್ಯದೊಂದಿಗೆ ಮೂರು ಮೊಬೈಲ್ ಫೋನ್‌ಗಳು ಹಾಗೂ ಕೃತ್ಯಕ್ಕೆ ಬಳಸಿದ KA-19 MR-1997 ಸಂಖ್ಯೆಯ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

Screenshot