Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಮಂಗಳೂರಿನಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಎಂಡಿಎಂಎ ಮಾದಕವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಬಂಧಿಸಿದ್ದಾರೆ.

Out Look Fashion

ಮೊದಲ ಪ್ರಕರಣದಲ್ಲಿ ಹೊಯ್ಗೆ ಬಜಾರ್‌ನ ಮನೆಯಿಂದ ಡ್ರಗ್ ಮಾರಾಟ ನಡೆಸುತ್ತಿದ್ದ ಪ್ರಣಾಮ್ ಕೋಟ್ಯಾನ್ ಎಂಬಾತನನ್ನು ಬಂಧಿಸಲಾಗಿದ್ದು, ಆತನಿಂದ ಸುಮಾರು 104 ಗ್ರಾಂ ಎಂಡಿಎಂಎ, ಮೊಬೈಲ್ ಫೋನ್, ಡಿಜಿಟಲ್ ತೂಕಮಾಪನ ಯಂತ್ರ ಹಾಗೂ ಜಿಪ್‌ಲಾಕ್ ಕವರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ವಸ್ತುಗಳ ಮೌಲ್ಯ ಸುಮಾರು ₹10.40 ಲಕ್ಷ ಎಂದು ಅಂದಾಜಿಸಲಾಗಿದೆ.

Jaya Refrigeration and Air Condition

ಎರಡನೇ ಪ್ರಕರಣದಲ್ಲಿ ಪದವಿನಂಗಡಿಯ ಮುಗರೋಡಿ ಪ್ರದೇಶದಲ್ಲಿ ಡ್ರಗ್ ಮಾರಾಟ ಮಾಡುತ್ತಿದ್ದ ಧನರಾಜ್ ಪೂಜಾರಿ ಅಲಿಯಾಸ್ ಧನು ವಳಚಿಲ್ ಎಂಬಾತನನ್ನು ಬಂಧಿಸಲಾಗಿದೆ. ಆತನಿಂದ 60 ಗ್ರಾಂ ಎಂಡಿಎಂಎ, ಮೊಬೈಲ್ ಫೋನ್, ಡಿಜಿಟಲ್ ತೂಕಮಾಪನ ಯಂತ್ರ ಹಾಗೂ ಜಿಪ್‌ಲಾಕ್ ಕವರ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇದರ ಮೌಲ್ಯ ಸುಮಾರು ₹6 ಲಕ್ಷ ಎಂದು ಅಂದಾಜಿಸಲಾಗಿದೆ.

ಎರಡು ಪ್ರಕರಣಗಳಲ್ಲಿ ಒಟ್ಟು 164 ಗ್ರಾಂ ಎಂಡಿಎಂಎ ಮಾದಕವಸ್ತು ವಶವಾಗಿದ್ದು, ಅದರ ಮೌಲ್ಯ ಸುಮಾರು ₹16.40 ಲಕ್ಷವಾಗಿದೆ.

ಬಂಧಿತ ಇಬ್ಬರು ಆರೋಪಿಗಳ ವಿರುದ್ಧ ಈ ಹಿಂದೆಯೂ ಹಲ್ಲೆ, ಬೆದರಿಕೆ, ಗಾಂಜಾ ಮಾರಾಟ, ಕೊಲೆ ಹಾಗೂ ಕೊಲೆಯತ್ನ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಈ ಡ್ರಗ್ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಉಳಿದ ಆರೋಪಿಗಳ ಪತ್ತೆಗಾಗಿ ಸಿಸಿಬಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಮಂಗಳೂರು ನಗರ ಸಿಸಿಬಿ ಅಧಿಕಾರಿಗಳು ಮತ್ತು ಸಿಬ್ಬಂದಿ ಈ ಯಶಸ್ವಿ ಕಾರ್ಯಾಚರಣೆಯನ್ನು ನಡೆಸಿದ್ದಾರೆ.