Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಮಂಗಳೂರು: ಹಲವು ವರ್ಷಗಳಿಂದ ನ್ಯಾಯಾಲಯದ ವಾರಂಟ್‌ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Out Look Fashion

ಬಂಧಿತರನ್ನು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಹಾಸನ ಜಿಲೆಯ ಶ್ರೀನಿವಾಸ ಸಿರಿವಾಸ್ (56) ಹಾಗೂ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಅಭಿಷೇಕ್ (28) ಎಂದು ಗುರುತಿಸಲಾಗಿದೆ.

Jaya Refrigeration and Air Condition

ಶ್ರೀನಿವಾಸ ಸಿರಿವಾಸ್ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ 2017ರಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ನ್ಯಾಯಾಲಯದಿಂದ ವಾರಂಟ್ ಜಾರಿಯಾಗಿತ್ತು. ಆರೋಪಿ ಸುಮಾರು ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದು, ನ್ಯಾಯಾಲಯಕ್ಕೆ ಹಾಜರಾಗದೇ ಪರಾರಿಯಾಗಿದ್ದನು.

ಇನ್ನೋರ್ವ ಆರೋಪಿ ಅಭಿಷೇಕ್ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ವಂಚನೆ ಪ್ರಕರಣದಲ್ಲಿ ವಾರಂಟ್ ಹೊರಡಿಸಲಾಗಿತ್ತು. ಈತನೂ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ಬಗ್ಗೆ ಖಚಿತ ಮಾಹಿತಿ ಸಂಗ್ರಹಿಸಿದ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ತಂಡವು ಜೂನ್ 6ರಂದು ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರನ್ನೂ ಬಂಧಿಸಿದೆ.

ಬಂಧಿತ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.