




ಪುತ್ತೂರು ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಕಾಲೇಜು ವಿದ್ಯಾರ್ಥಿಗಳ ನಡುವೆ ಜಗಳ ನಡೆದ ಘಟನೆ ವರದಿಯಾಗಿದೆ.

ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಮಾತಿನ ಚಕಮಕಿ ಬಳಿಕ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದ್ದು, ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಮಾಹಿತಿ ತಿಳಿದು ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡು ಜಗಳದಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿಗಳನ್ನು ಠಾಣೆಗೆ ಕರೆದೊಯ್ದಿದ್ದಾರೆ.
ಪ್ರಸ್ತುತ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
