Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಮಂಗಳೂರು: ಕಳೆದ ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ.

Out Look Fashion
Screenshot

ಕರ್ನಾಟಕ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಆರೋಪಿ ರಮ್ಮಿ @ ರಮೇಶ್ ಎಂಬಾತನ ವಿರುದ್ಧ ಕಳ್ಳತನ ಸೇರಿದಂತೆ ವಿವಿಧ ಪ್ರಕರಣಗಳು ದಾಖಲಾಗಿದ್ದು, ನ್ಯಾಯಾಲಯದಿಂದ ವಾರಂಟ್ ಜಾರಿಯಾಗಿತ್ತು. ಆದರೆ ಆರೋಪಿ ಸುಮಾರು ಎರಡು ವರ್ಷಗಳಿಂದ ತಲೆಮರೆಸಿಕೊಂಡು ಪೊಲೀಸರಿಂದ ತಪ್ಪಿಸಿಕೊಳ್ಳುತ್ತಿದ್ದ.

Jaya Refrigeration and Air Condition

ಈ ಹಿನ್ನೆಲೆಯಲ್ಲಿ ಕರ್ನಾಟಕ ನಗರ ಪೊಲೀಸ್ ಠಾಣೆಯ ವಿಶೇಷ ತಂಡ ಕಾರ್ಯಾಚರಣೆ ನಡೆಸಿ, ಆರೋಪಿ ಬೆಂಗಳೂರಿನಲ್ಲಿ ಅಡಗಿದ್ದ ಮಾಹಿತಿ ಆಧರಿಸಿ ಪತ್ತೆ ಹಚ್ಚಿ ಬಂಧಿಸಿದೆ.

ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.