Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಮಂಗಳೂರು: ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎನ್‌ಡಿಪಿಎಸ್ (NDPS) ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Out Look Fashion

ಉಳ್ಳಾಲ ಪೊಲೀಸ್ ಠಾಣೆ ಪ್ರಕರಣ ಸಂಖ್ಯೆ 76/21 ರಲ್ಲಿ NDPS ಕಾಯ್ದೆಯ 8(ಸಿ) ಹಾಗೂ 21(ಬಿ) ಕಲಂಗಳಡಿ ಆರೋಪಿಯಾಗಿರುವ ಫಜಲ್ (31), ತಂದೆ ಮೊಹಮ್ಮದ್ ಅಲಿ, ಕಾಸರಗೋಡು ಜಿಲ್ಲೆಯ ಉಪ್ಪಳದ ಪಚ್ಚಿಲಾಂಬರ್ ನಿವಾಸಿ, 2021ರಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದನು. ಆದರೆ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.

Jaya Refrigeration and Air Condition

ಆರೋಪಿಯ ವಿರುದ್ಧ ನ್ಯಾಯಾಲಯದಿಂದ ವಾರಂಟ್ ಜಾರಿಯಾಗಿದ್ದ ಹಿನ್ನೆಲೆಯಲ್ಲಿ ಪೊಲೀಸರು ಆತನ ಪತ್ತೆಗೆ ವಿಶೇಷ ಕಾರ್ಯಾಚರಣೆ ನಡೆಸಿದ್ದರು. ಈ ಕಾರ್ಯಾಚರಣೆಯ ವೇಳೆ ಜೂನ್ 9ರಂದು ಉಪ್ಪಳದಲ್ಲಿರುವ ಆತನ ಮನೆಯಿಂದ ಆರೋಪಿಯನ್ನು ಬಂಧಿಸಲಾಗಿದೆ.