Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಮಂಡ್ಯ: ಐತಿಹಾಸಿಕ ಹಾಗೂ ಪ್ರಸಿದ್ಧ ಪುಣ್ಯಕ್ಷೇತ್ರವಾದ ಮಂಡ್ಯ ಜಿಲ್ಲೆಯ ಮೇಲುಕೋಟೆಯ ಯೋಗನರಸಿಂಹಸ್ವಾಮಿ ದೇವಸ್ಥಾನದಲ್ಲಿ ಭಾರಿ ಕಳ್ಳತನ ನಡೆದಿರುವ ಶಂಕೆ ವ್ಯಕ್ತವಾಗಿದೆ. ದೇವಸ್ಥಾನದ ಅರ್ಚಕರು ಹಾಗೂ ಸಿಬ್ಬಂದಿ ವಿರುದ್ಧವೇ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ (Melkote Police Station) ಪ್ರಕರಣ ದಾಖಲಾಗಿದೆ.

Out Look Fashion

​ದೇವಸ್ಥಾನದ ಹುಂಡಿಯಲ್ಲಿದ್ದ ಚಿನ್ನ, ಬೆಳ್ಳಿ ಹಾಗೂ ನಗದು ಕಳ್ಳತನವಾಗಿದೆ ಎಂದು ಆರೋಪಿಸಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಶೀಲಾ ಅವರು ಪೊಲೀಸರಿಗೆ ಅಧಿಕೃತವಾಗಿ ದೂರು ನೀಡಿದ್ದಾರೆ. ಹಿಂದೆ ನಡೆದಿದ್ದ ಪ್ರಸಿದ್ಧ ವಜ್ರಾಂಗಿ ಆಭರಣ ಕಳ್ಳತನದ ಬಳಿಕ, ಇಷ್ಟೊಂದು ದೊಡ್ಡ ಪ್ರಮಾಣದ ಕಳ್ಳತನದ ಶಂಕೆ ವ್ಯಕ್ತವಾಗಿರುವುದು ಭಕ್ತರಲ್ಲಿ ತೀವ್ರ ಆತಂಕ ಮೂಡಿಸಿದೆ. 

Jaya Refrigeration and Air Condition

​ಪ್ರಕರಣದ ಹಿನ್ನೆಲೆ ಮತ್ತು ಸಿಸಿ ಕ್ಯಾಮೆರಾ ರಹಸ್ಯ!
​ದೇವಾಲಯದಲ್ಲಿ ಕಿಡಿಗೇಡಿಗಳು ಪದೇ ಪದೇ ಸಿಸಿ ಕ್ಯಾಮೆರಾಗಳನ್ನ ಕೆಡಿಸುತ್ತಿದ್ದ ಹಿನ್ನೆಲೆಯಲ್ಲಿ, ಆಡಳಿತ ಮಂಡಳಿಯು ಅತ್ಯಂತ ಗೌಪ್ಯವಾಗಿ ರಹಸ್ಯ ಸಿಸಿ ಕ್ಯಾಮೆರಾಗಳನ್ನ ಅಳವಡಿಸಿತ್ತು. ಈ ರಹಸ್ಯ ಕ್ಯಾಮೆರಾಗಳನ್ನು ಅಳವಡಿಸಿರುವ ವಿಚಾರ ಕೇವಲ ದೇವಾಲಯದ ಆಡಳಿತ ಸಿಬ್ಬಂದಿಗೆ ಮಾತ್ರ ತಿಳಿದಿತ್ತು. ​ಆದರೆ, 2026 ರ ಜನವರಿ 12 ರಂದು ಈ ರಹಸ್ಯ ಸಿಸಿ ಕ್ಯಾಮೆರಾವನ್ನು ಸಹ ಕಿಡಿಗೇಡಿಗಳು ಕೆಡಿಸಿದ್ದಾರೆ. ಆಡಳಿತ ಮಂಡಳಿಗೆ ಮಾತ್ರ ಗೊತ್ತಿದ್ದ ಈ ರಹಸ್ಯ ಕ್ಯಾಮೆರಾ ಹಾಳು ಮಾಡಿರುವುದು, ಕಳ್ಳತನದ ಉದ್ದೇಶದಿಂದಲೇ ದೇವಸ್ಥಾನದ ಒಳಗಿನ ಸಿಬ್ಬಂದಿ ಹಾಗೂ ಅರ್ಚಕರೇ ಈ ಕೃತ್ಯ ಎಸಗಿದ್ದಾರೆ ಎಂಬ ಬಲವಾದ ಶಂಕೆಗೆ ಕಾರಣವಾಗಿದೆ.