Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಪುತ್ತೂರು: ಬಿಜೆಪಿ ಬನ್ನೂರು ಶಕ್ತಿಕೇಂದ್ರದ ಅಧ್ಯಕ್ಷರಾದ ಸೂರಜ್ ಗೋಳ್ತಿಲ ಅವರು ಹೃದಯಾಘಾತದಿಂದ ಅಕಾಲಿಕವಾಗಿ ನಿಧನರಾದರು. ಅವರ ನಿಧನ ಸುದ್ದಿ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳಲ್ಲಿ ದುಃಖದ ಛಾಯೆ ಮೂಡಿಸಿದೆ.

Out Look Fashion

ಸೂರಜ್ ಗೋಳ್ತಿಲ ಅವರು ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಬನ್ನೂರು ಶಕ್ತಿಕೇಂದ್ರದ ಅಭಿವೃದ್ಧಿ ಹಾಗೂ ಪಕ್ಷದ ಬಲವರ್ಧನೆಗಾಗಿ ಶ್ರಮಿಸಿದ್ದರು. ಅವರ ಸರಳ ವ್ಯಕ್ತಿತ್ವ, ಕಾರ್ಯಕರ್ತರೊಂದಿಗೆ ಹೊಂದಿದ್ದ ಆತ್ಮೀಯ ಬಾಂಧವ್ಯ ಎಲ್ಲರ ಮನದಲ್ಲಿ ಅಚ್ಚಳಿಯದ ನೆನಪಾಗಿ ಉಳಿಯಲಿದೆ.

Jaya Refrigeration and Air Condition

ಅವರ ನಿಧನಕ್ಕೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ವಿವಿಧ ಗಣ್ಯರು ಸಂತಾಪ ಸೂಚಿಸಿದ್ದು, ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿದ್ದಾರೆ. ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲೆಂದು ಕೋರಿದ್ದಾರೆ.