



ಧರ್ಮಸ್ಥಳ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 17 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.

ಧಾರವಾಡ ಮೂಲದ ಬಾಲಕಿ ತನ್ನ ತಾಯಿಯೊಂದಿಗೆ ವಾಸವಾಗಿದ್ದು, ಕಳೆದ ಕೆಲವು ಸಮಯಗಳಿಂದ ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈ ಕುರಿತು ಈಗಾಗಲೇ ಚಿಕಿತ್ಸೆ ಪಡೆದಿದ್ದರೂ ಆರೋಗ್ಯದಲ್ಲಿ ಸುಧಾರಣೆ ಕಾಣದ ಹಿನ್ನೆಲೆಯಲ್ಲಿ ಬಾಲಕಿ ಮನನೊಂದಿದ್ದಳು ಎಂದು ತಿಳಿದುಬಂದಿದೆ. ಜೂನ್ 16ರಂದು ಬೆಳಿಗ್ಗೆ ತಾನು ವಾಸವಿದ್ದ ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಬಾಲಕಿ ಪತ್ತೆಯಾಗಿದ್ದಾಳೆ. ಘಟನೆಯ ಕುರಿತು ಮೃತಳ ತಾಯಿ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಸಂಖ್ಯೆ 55/2026 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

ಪೊಲೀಸರು ಘಟನೆಯ ಕುರಿತು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದು, ಸಾವಿನ ನಿಖರ ಕಾರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
