




ಸರ್ಕಾರಿ ಆಸ್ಪತ್ರೆಗಳಲ್ಲಿನ ಅವ್ಯವಸ್ಥೆ ಮತ್ತು ವೈದ್ಯರ ಕೊರತೆ ಕುರಿತು ಪ್ರಶ್ನೆ ಎತ್ತಿದರೆ ನಮ್ಮ ಮೇಲೆಯೇ ಆರೋಪ ಮಾಡಲಾಗುತ್ತದೆ ಎಂದು ಸಾಮಾಜಿಕ ಕಾರ್ಯಕರ್ತ ಪವನ್ ಕುಮಾರ್ ಶಿರ್ವ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜಯದೇವ ಆಸ್ಪತ್ರೆಯಲ್ಲಿ ವೈದ್ಯರ ಕೊರತೆಯಿಂದ ಎರಡು ದಿನಗಳ ಅವಧಿಯಲ್ಲಿ 12 ಮಂದಿ ಮೃತಪಟ್ಟಿರುವ ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಜನರ ಜೀವಕ್ಕೆ ಸಂಬಂಧಿಸಿದ ಗಂಭೀರ ವಿಷಯಗಳ ಬಗ್ಗೆ ಮಾತನಾಡಿದಾಗ ಅದನ್ನು ರಾಜಕೀಯ ಅಥವಾ ವಿರೋಧದ ದೃಷ್ಟಿಯಿಂದ ನೋಡುವುದು ಸರಿಯಲ್ಲ ಎಂದು ಹೇಳಿದ್ದಾರೆ.

“ಸಮಸ್ಯೆಗಳನ್ನು ಪ್ರಶ್ನಿಸಿದರೆ ವಿರೋಧಿಗಳು ಎಂದು ಕರೆಯುತ್ತಾರೆ. ಆದರೆ ಮೌನವಾಗಿದ್ದರೆ ಜನರ ಜೀವವೇ ಹೋಗುತ್ತದೆ. ಜನರ ಹಿತದೃಷ್ಟಿಯಿಂದ ಆಸ್ಪತ್ರೆಗಳಲ್ಲಿನ ಕೊರತೆಗಳು, ವೈದ್ಯರ ಅಭಾವ ಹಾಗೂ ಮೂಲಸೌಕರ್ಯಗಳ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವುದು ನಮ್ಮ ಕರ್ತವ್ಯ” ಎಂದು ಪವನ್ ಕುಮಾರ್ ಶಿರ್ವ ಹೇಳಿದ್ದಾರೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ವೈದ್ಯರು ಮತ್ತು ಸಿಬ್ಬಂದಿಯನ್ನು ತಕ್ಷಣ ನೇಮಕ ಮಾಡಿ, ಆರೋಗ್ಯ ಸೇವೆಗಳನ್ನು ಸುಧಾರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
