Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡ (Pavithra Gowda) ಅವರಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಬೆಂಗಳೂರಿನ ಸಂಧ್ಯಾ ನಾಗರಾಜ್‌ ವಿರುದ್ಧ ದೂರು ನೀಡಲಾಗಿದೆ.

Out Look Fashion

ಇತ್ತೀಚೆಗೆ ಮಾಧ್ಯಮವೊಂದರಲ್ಲಿ ಮಾತನಾಡಿದ್ದ ಸಂಧ್ಯಾ ನಾಗರಾಜ್‌ (Sandhya Nagaraj), ಜೈಲಿನಲ್ಲಿ ಅಧಿಕಾರಿಗಳು ಆಕೆಗೆ ಸಹಕಾರ ಕೊಡ್ತಿದ್ದಾರೆ. ಪ್ರತಿದಿನ ಬಾಕ್ಸ್‌ನಲ್ಲಿ ಊಟ ತಂದುಕೊಡ್ತಾರೆ. ಜೈಲಿನಲ್ಲಿ ರಾಜಾತಿಥ್ಯ ಪಡೆಯುತ್ತಿದ್ದಾರೆ ಎಂದು ಆರೋಪಿಸಿದ್ದರು. ಈ ಹಿಂದೆ ಜೈಲಿನಲ್ಲಿ ಇದ್ದ ಸಂಧ್ಯಾ ನಾಗರಾಜ್‌ ಪವಿತ್ರಾಗೌಡ ಅವರನ್ನ ಭೇಟಿ ಮಾಡಿದ್ರಂತೆ. ಹೀಗಾಗಿ ಅವರಿಗೆ ಎಲ್ಲಾ ಸೌಲಭ್ಯ ಸಿಗ್ತಿದೆ ಅಂತ ಮಾಧ್ಯಮಗಳ ಮುಂದೆ ಹೇಳಿದ್ರು. ಈ ಆರೋಪವನ್ನು ಅಲ್ಲಗಳೆದಿರುವ ಪವಿತ್ರಾಗೌಡ ಜೈಲಿನಲ್ಲಿ ಇದ್ದುಕೊಂಡೇ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಜೊತೆಗೆ ರಶ್ಮಿ ಎಂಬ ಆರೋಪಿಯೂ ದೂರು ನೀಡಿದ್ದಾರೆ.

Jaya Refrigeration and Air Condition