Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಮೈಸೂರು: ನಿನ್ನೆ ನಡೆದ ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ ಪಕ್ಷದ ನಾಲ್ವರು ಅಡ್ಡ ಮತದಾನ ಮಾಡಿದ್ದಾರೆ. ಅವರು ಯಾರು ಅಂತಲೂ ಗೊತ್ತಿದೆ. ಈಗಾಗಲೇ ಅವರು ಪಕ್ಷ ಬಿಡುವ ಚರ್ಚೆಯನ್ನೂ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಹೇಳಿದ್ದಾರೆ.

Out Look Fashion

ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪರಿಷತ್‌ ಚುನಾವಣೆ ಸಂಬಂಧ ಹಲವು ಸ್ಫೋಟಕ ವಿಚಾರಗಳನ್ನ ಹಂಚಿಕೊಂಡರು.ಯಾರು ಅಡ್ಡ ಮತದಾನ ಮಾಡಿದ್ದಾರೆ, ಯಾವ್ಯಾವ ಕಾರಣಕ್ಕೆ ಮಾಡಿದ್ದಾರೆ ಅನ್ನೋದ್ರ ಬಗ್ಗೆ ನನಗೆ ಸಂಪೂರ್ಣ ಮಾಹಿತಿ ಇದೆ. ಅವರು ಅಡ್ಡ ಮತದಾನ ಮಾಡ್ತಾರೆ ಅನ್ನೋದರ ಬಗ್ಗೆ ಮೊದಲೇ ನಿರೀಕ್ಷೆಯಿತ್ತು. ಆದ್ದರಿಂದ ನನಗಿದು ಯಾವುದೇ ಅಚ್ಚರಿ, ಆಘಾತ ಉಂಟುಮಾಡಿಲ್ಲ. ಈಗಲೂ ಅಂಥವರು ಯಾವ ರೀತಿ ನಡೆದುಕೊಳ್ಳಬಹುದು ಅನ್ನೋದನ್ನ ತಿಳಿಯೋಕೆ ಅಭ್ಯರ್ಥಿಯನ್ನ ನಿಲ್ಲಿಸಿದ್ವಿ ಎಂದು ತಿಳಿಸಿದ್ದಾರೆ.

Jaya Refrigeration and Air Condition

ಅಡ್ಡ ಮತದಾನ ಮಾಡಿದವರು ಪಕ್ಷ ಬಿಡುವ ಹಂತದವರೆಗೂ ಅವರೆಲ್ಲ ಚರ್ಚೆ ಮಾಡಿದ್ದಾರೆ ಎಂದರಲ್ಲದೇ, ಹೋಗುವವರೆಲ್ಲಾ ಹೋಗಲಿ, ನನಗೆ ಪಕ್ಷ ಕಟ್ಟುವುದು ಗೊತ್ತಿದೆ. ಯುವಕರನ್ನ (ಝೆನ್ ಜಿ) ಕರೆ ತಂದು ಪಕ್ಷ ಕಟ್ಟುತ್ತೇನೆ. ಹೊಸ ಮುಖಗಳಿಗೆ ಆದ್ಯತೆ ನೀಡಬೇಕೆಂದು ತೀರ್ಮಾನ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.