




ಪುತ್ತೂರು: ಭಾರತೀಯ ಸೇನೆಗೆ ಆಯ್ಕೆಯಾಗಿರುವ ಪುತ್ತೂರಿನ ಇಬ್ಬರು ಯುವಕರಾದ ಮುರಳಿ ಮುಡಂಬೈಲು ಹಾಗೂ ಶ್ರವಣೇಶ್ ಅವರಿಗೆ ಇಂದು ಪುಣಚದಲ್ಲಿ ಪುತ್ತೂರು ಬಿಜೆಪಿ ವತಿಯಿಂದ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ ನಡೆಯಿತು.


ಭಾರತ ಮಾತೆಯ ಸೇವೆಗೆ ತಮ್ಮನ್ನು ಸಮರ್ಪಿಸಿಕೊಂಡು ಭಾರತೀಯ ಸೇನೆಗೆ ಆಯ್ಕೆಯಾಗಿರುವ ಈ ಇಬ್ಬರು ಯುವಕರ ಸಾಧನೆಯನ್ನು ಗೌರವಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಪುತ್ತೂರಿನ ಮಾಜಿ ಶಾಸಕ ಶ್ರೀ ಸಂಜೀವ ಮಠಂದೂರು, ಪುತ್ತೂರು ಗ್ರಾಮಾಂತರ ಮಂಡಲ ಬಿಜೆಪಿಯ ಉಪಾಧ್ಯಕ್ಷರು ಹಾಗೂ ಪುಣಚ ಮಹಾಶಕ್ತಿ ಕೇಂದ್ರದ ಪ್ರಭಾರಿಗಳಾದ ಶ್ರೀ ನಾಗೇಶ್ ಟಿ.ಎಸ್. ಕೆಮ್ಮಾಯಿ, ಪುಣಚ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಶ್ರೀ ರಾಜೇಶ್ ಬಾಳೆಕಲ್ಲು, ಶ್ರೀ ಅಶೋಕ್ ಮೂಡಂಬೈಲು, ಶಕ್ತಿ ಕೇಂದ್ರದ ಅಧ್ಯಕ್ಷರಾದ ಶ್ರೀ ಪ್ರವೀಣ್ ಪುಣಚ ಹಾಗೂ ವಿವಿಧ ಬೂತ್ ಅಧ್ಯಕ್ಷರು, ಅಕ್ಷರ ಪ್ರಮುಖರು, ಹಿರಿಯರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
