Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಮಂಗಳೂರು: ವಿಶ್ವ ಯೋಗ ದಿನದ ಅಂಗವಾಗಿ ದಕ್ಷಿಣ ಕನ್ನಡ ಭಾರತೀಯ ಜನತಾ ಪಾರ್ಟಿ ವತಿಯಿಂದ ಮಂಗಳೂರಿನ ಕದ್ರಿ ದೇವಸ್ಥಾನದಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

Out Look Fashion
Screenshot

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು ಭಾಗವಹಿಸಿ ಯೋಗಾಭ್ಯಾಸ ನಡೆಸಿದರು. ಯೋಗವು ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡುವ ಅತ್ಯುತ್ತಮ ಸಾಧನವಾಗಿದ್ದು, ಪ್ರತಿಯೊಬ್ಬರೂ ತಮ್ಮ ದಿನನಿತ್ಯದ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಲಾಯಿತು.

Jaya Refrigeration and Air Condition
Screenshot

ಈ ಸಂದರ್ಭದಲ್ಲಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವಾರ್ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ವಿಶ್ವ ಯೋಗ ದಿನದ ಅಂಗವಾಗಿ ನಡೆದ ಈ ಕಾರ್ಯಕ್ರಮದಲ್ಲಿ ನೂರಾರು ಮಂದಿ ಭಾಗವಹಿಸಿ ಯೋಗಾಭ್ಯಾಸ ಮಾಡುವ ಮೂಲಕ ಆರೋಗ್ಯಕರ ಜೀವನಶೈಲಿಯ ಸಂದೇಶ ಸಾರಿದರು.