



ಪುತ್ತೂರು: ಮಾದಕ ದ್ರವ್ಯಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರುದ್ಧದ ಅಂತರಾಷ್ಟ್ರೀಯ ದಿನದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಹಾಗೂ ಪುತ್ತೂರು ಉಪ ವಿಭಾಗದ ವತಿಯಿಂದ ಜೂನ್ 26ರಂದು “ಫಿಟ್ ಇಂಡಿಯಾ – ಮಾದಕ ದ್ರವ್ಯ ಮುಕ್ತ 5K ಮ್ಯಾರಥಾನ್” ಆಯೋಜಿಸಲಾಗಿದೆ.


ಬೆಳಿಗ್ಗೆ 6 ಗಂಟೆಗೆ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಮ್ಯಾರಥಾನ್‌ಗೆ ಚಾಲನೆ ದೊರೆಯಲಿದೆ. ಅಲ್ಲಿಂದ ದರ್ಬೆ ವೃತ್ತ, ಕ್ಯಾಂಪ್ಕೋ ಚಾಕೊಲೇಟ್ ಫ್ಯಾಕ್ಟರಿ ಮಾರ್ಗವಾಗಿ ಸಂಚರಿಸಿ ಮತ್ತೆ ದೇವಸ್ಥಾನದ ಮೈದಾನದಲ್ಲೇ ಮ್ಯಾರಥಾನ್ ಮುಕ್ತಾಯಗೊಳ್ಳಲಿದೆ.

ಮಹಿಳೆಯರು ಹಾಗೂ ಪುರುಷರು ಸೇರಿದಂತೆ ಎಲ್ಲಾ ಸಾರ್ವಜನಿಕರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದ್ದು, ಜಿಲ್ಲೆಯ ಸಂಬಂಧಪಟ್ಟ ಪೊಲೀಸ್ ಠಾಣೆಗಳಲ್ಲಿ ಅಥವಾ ಆನ್‌ಲೈನ್ ಮೂಲಕ ಹೆಸರು ನೋಂದಾಯಿಸಿಕೊಳ್ಳಬಹುದು.
ನೋಂದಣಿಗೆ ಜೂನ್ 25ರ ಸಂಜೆ 6 ಗಂಟೆಯವರೆಗೆ ಅವಕಾಶವಿದೆ. ಮಾದಕ ದ್ರವ್ಯ ಮುಕ್ತ ಸಮಾಜ ನಿರ್ಮಾಣ ಮತ್ತು ಆರೋಗ್ಯವಂತ ಭಾರತದ ಸಂದೇಶ ಸಾರುವ ಈ ಜಾಗೃತಿ ಮ್ಯಾರಥಾನ್‌ನಲ್ಲಿ ಸಾರ್ವಜನಿಕರು, ಯುವಜನರು ಹಾಗೂ ಸಂಘ-ಸಂಸ್ಥೆಗಳ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಮನವಿ ಮಾಡಿದೆ.
