Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಉಡುಪಿ: ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿರುವ ಹಿನ್ನೆಲೆಯಲ್ಲಿ ಸೋಮವಾರ ಬೆಳಿಗ್ಗೆ ಆತಂಕದ ವಾತಾವರಣ ನಿರ್ಮಾಣವಾಯಿತು.

Out Look Fashion

ಬೆದರಿಕೆ ಸಂದೇಶದ ಮಾಹಿತಿ ದೊರಕುತ್ತಿದ್ದಂತೆ ಉಡುಪಿ ನಗರ ಪೊಲೀಸರು, ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಧಾವಿಸಿ ನ್ಯಾಯಾಲಯ ಸಂಕೀರ್ಣದಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಸಿದರು. ನ್ಯಾಯಾಲಯದ ಆವರಣ ಹಾಗೂ ಕಟ್ಟಡದ ವಿವಿಧ ಭಾಗಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಗುತ್ತಿದೆ.

Jaya Refrigeration and Air Condition

ಭದ್ರತಾ ದೃಷ್ಟಿಯಿಂದ ನ್ಯಾಯಾಲಯ ಸಂಕೀರ್ಣದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪೊಲೀಸ್ ಬಂದೋಬಸ್ತ್‌ನ್ನು ಬಿಗಿಗೊಳಿಸಲಾಗಿದೆ.

ಇ-ಮೇಲ್ ಮೂಲಕ ಬಂದಿರುವ ಬೆದರಿಕೆ ಸಂದೇಶದ ಮೂಲವನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಈವರೆಗೆ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿರುವ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.