Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಮಂಗಳೂರು, ಜುಲೈ 1: ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಗರೋಡಿಯ ಮಾರಿಯಲ್ ಹೌಸ್ ಬಳಿ ಇಂದು ಮುಂಜಾನೆ ಸುಮಾರು 4.45 ರಿಂದ 5.00 ಗಂಟೆಯ ವೇಳೆಗೆ ತಡೆಗೋಡೆ ಕುಸಿದ ಘಟನೆ ಸಂಭವಿಸಿದೆ.

Out Look Fashion

ತಡೆಗೋಡೆಯ ಕೆಳಭಾಗದಲ್ಲಿದ್ದ ಬಾಡಿಗೆ ಮನೆಗಳ ಹಿಂಭಾಗದ ಗೋಡೆಗಳು ಕುಸಿದಿದ್ದು, ಒಟ್ಟು ನಾಲ್ಕು ಕುಟುಂಬಗಳು ವಾಸವಿದ್ದ ಮನೆಗಳಿಗೆ ಹಾನಿಯಾಗಿದೆ. ಅವುಗಳಲ್ಲಿ ಎರಡು ಕುಟುಂಬಗಳು ಹೆಚ್ಚು ಪರಿಣಾಮಕ್ಕೊಳಗಾಗಿವೆ.

Jaya Refrigeration and Air Condition

ಮೊದಲ ಕುಟುಂಬದ ಲಾಲ್‌ಬಾಬು (37) ಹಾಗೂ ಪತ್ನಿ ಇಂದು (34) ಮೂಲತಃ ಬಿಹಾರ ರಾಜ್ಯದವರಾಗಿದ್ದು, ಕಳೆದ ಎಂಟು ವರ್ಷಗಳಿಂದ ಇಲ್ಲಿ ವಾಸವಾಗಿದ್ದರು. ದಂಪತಿಗೆ ಅಲ್ಕಾ (14), ಅನುಷ್ಕಾ (11), ಅನಾಮಿಕಾ (7) ಮತ್ತು ತನು (3) ಎಂಬ ನಾಲ್ವರು ಪುತ್ರಿಯರಿದ್ದಾರೆ. ಪೋಷಕರು ಹಾಗೂ ಇಬ್ಬರು ಮಕ್ಕಳನ್ನು ಸುರಕ್ಷಿತವಾಗಿ ರಕ್ಷಿಸಲಾಗಿದ್ದು, ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾದ ಇಬ್ಬರು ಬಾಲಕಿಯರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

Screenshot

ಎರಡನೇ ಕುಟುಂಬದ ಬಾಲಕೃಷ್ಣ (40) ಹಾಗೂ ಪತ್ನಿ ಶಾಂತಾ (35) ಮೂಲತಃ ಉಡುಪಿ ಜಿಲ್ಲೆಯವರಾಗಿದ್ದು, ಕಳೆದ ಎಂಟು ತಿಂಗಳಿಂದ ಈ ಮನೆಯಲ್ಲಿ ವಾಸವಾಗಿದ್ದರು. ಬಾಲಕೃಷ್ಣ ಅವರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದ್ದು, ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾದ ಶಾಂತಾ ಮೃತಪಟ್ಟಿರುವ ಶಂಕೆ ಇದೆ.

ಗಾಯಾಳುಗಳು ಹಾಗೂ ಅಸ್ವಸ್ಥರನ್ನು ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.