Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ್ದರಿಂದ, ಜಿಲ್ಲಾಧಿಕಾರಿಗಳು ಜುಲೈ 2ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದರು.

Out Look Fashion

ಆದರೆ, ಈ ಆದೇಶದ ನಡುವೆಯೂ ಪುತ್ತೂರಿನ ಖಾಸಗಿ ಕಾಲೇಜೊಂದರ ಪದವಿ ಪೂರ್ವ ವಿಭಾಗದಲ್ಲಿ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ತರಗತಿ ನಡೆಸಲಾಗಿದೆ ಎಂಬ ಮಾಹಿತಿ ಅಧಿಕಾರಿಗಳಿಗೆ ಲಭ್ಯವಾಗಿದೆ.

Jaya Refrigeration and Air Condition

ಈ ಮಾಹಿತಿ ಆಧರಿಸಿ ತಹಶೀಲ್ದಾರ್ ಬಿ.ಎಸ್. ಕೂಡಲಗಿ ಅವರು ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿಗಳ ಆದೇಶವನ್ನು ಉಲ್ಲಂಘಿಸಿದ ಆರೋಪದ ಹಿನ್ನೆಲೆಯಲ್ಲಿ ಕಾಲೇಜು ಆಡಳಿತಕ್ಕೆ ನೋಟಿಸ್ ಜಾರಿ ಮಾಡಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ತಹಶೀಲ್ದಾರ್, ಜಿಲ್ಲಾಧಿಕಾರಿಗಳು ಹೊರಡಿಸುವ ರಜೆ ಆದೇಶವನ್ನು ಎಲ್ಲಾ ಶಿಕ್ಷಣ ಸಂಸ್ಥೆಗಳು ಕಡ್ಡಾಯವಾಗಿ ಪಾಲಿಸಬೇಕು. ಆದೇಶ ಉಲ್ಲಂಘನೆಯ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ನಡೆಸಿ ನೋಟಿಸ್ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಘಟನೆ ಜಿಲ್ಲೆಯ ಶಿಕ್ಷಣ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಕಾಲೇಜು ಆಡಳಿತದ ಪ್ರತಿಕ್ರಿಯೆಗಾಗಿ ಅಧಿಕಾರಿಗಳು ಕಾಯುತ್ತಿದ್ದಾರೆ.