Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಮಡಿಕೇರಿ: ಕೊಡಗು (Kodagu) ಜಿಲ್ಲೆಯಲ್ಲಿ ಕಡೆಗೂ ಮಳೆ ಚುರುಕುಗೊಂಡಿದೆ. ಕಳೆದ ಕೆಲ ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಜಿಲ್ಲೆಯ ಹಲವು ಭಾಗಗಳಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ಮಳೆಯೊಂದಿಗೆ ಚಳಿ ವಾತಾವರಣವೂ ಹೆಚ್ಚಾಗಿದ್ದು, ಜನಜೀವನದ ಮೇಲೆ ಅದರ ಪರಿಣಾಮ ಕಂಡುಬಂದಿದೆ. ಈ ನಡುವೆ ಹಾರಂಗಿ ಜಲಾಶಯಕ್ಕೆ (Harangi Reservoir) ಇಂದು 1,470 ಕ್ಯೂಸೆಕ್ ಒಳಹರಿವು ಬರುತ್ತಿದ್ದು, ರೈತರಲ್ಲಿ ಹೊಸ ಆಶಾಭಾವನೆ ಮೂಡಿಸಿದೆ.

Out Look Fashion

ಕೊಡಗು ಜಿಲ್ಲೆಯ ಪ್ರಮುಖ ಜಲಾಶಯವಾದ ಹಾರಂಗಿ ಜಲಾಶಯಕ್ಕೆ ಒಳಹರಿವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 2,859 ಅಡಿ ಆಗಿದ್ದು, ಇಂದು ಜಲಾಶಯದಲ್ಲಿ 2,832.72 ಅಡಿ ನೀರು ಸಂಗ್ರಹವಾಗಿದೆ. ಇಂದು ಜಲಾಶಯಕ್ಕೆ 1,479 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ 180 ಕ್ಯೂಸೆಕ್ ನೀರನ್ನು ಹೊರಹರಿಸಲಾಗುತ್ತಿದೆ.

Jaya Refrigeration and Air Condition

ಜಲಾಶಯದ ಒಟ್ಟು ನೀರು ಸಂಗ್ರಹ ಸಾಮರ್ಥ್ಯ 8.5 ಟಿಎಂಸಿ ಆಗಿದ್ದು, ಪ್ರಸ್ತುತ 2.7 ಟಿಎಂಸಿ ನೀರು ಸಂಗ್ರಹವಾಗಿದೆ. ಮುಂಬರುವ ದಿನಗಳಲ್ಲಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದ್ದು, ಹಾರಂಗಿ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ರೈತರು ಕೂಡ ಉತ್ತಮ ಮಳೆಯ ನಿರೀಕ್ಷೆಯಲ್ಲಿ ಕೃಷಿ ಚಟುವಟಿಕೆಗಳನ್ನು ಚುರುಕುಗೊಳಿಸಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಮಳೆ ಚುರುಕುಗೊಂಡಿದ್ದು, ಮಡಿಕೇರಿ, ಸೋಮವಾರಪೇಟೆ, ವಿರಾಜಪೇಟೆ ಸೇರಿದಂತೆ ಹಲವು ಭಾಗಗಳಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಮಳೆಯ ಜೊತೆಗೆ ಚಳಿ ವಾತಾವರಣವೂ ಹೆಚ್ಚಾಗಿದ್ದು, ಜನರು ಬೆಚ್ಚನೆಯ ಉಡುಪುಗಳನ್ನು ಧರಿಸಿ ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಈ ಬಾರಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳು ಗರಿಗೆದರಿವೆ. ಭತ್ತ, ಕಾಫಿ ಹಾಗೂ ಇತರ ಬೆಳೆಗಳ ಕೃಷಿಯಲ್ಲಿ ರೈತರು ಉತ್ಸಾಹದಿಂದ ತೊಡಗಿದ್ದು, ಉತ್ತಮ ಬೆಳೆಯ ನಿರೀಕ್ಷೆಯಲ್ಲಿದ್ದಾರೆ.