Akshaya Sharadhotsava
Darbe Salon
Mahalingeshwara Car Air Condition
New Dot Dress Mart
Screenshot

ಪುತ್ತೂರು: ಕಟ್ಟೆ ಫ್ರೆಂಡ್ಸ್ ಬಲ್ನಾಡು ಆಯೋಜಿಸುತ್ತಿರುವ “ಬಲ್ನಾಡ್ದ ಕೆಸರ್ ದ ಗೊಬ್ಬು – ಸೀಸನ್-5” ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಬಲ್ನಾಡಿನ ಭಟ್ಟಿ ವಿನಾಯಕ ದೇವಸ್ಥಾನದಲ್ಲಿ ನಡೆಯಿತು.

Out Look Fashion

ಭಟ್ಟಿ ವಿನಾಯಕ ದೇವರ ಆಶೀರ್ವಾದ ಪಡೆದು, ಗಣ್ಯರ ಸಮ್ಮುಖದಲ್ಲಿ ಆಮಂತ್ರಣ ಪತ್ರಿಕೆಯನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಕ್ರೀಡಾಕೂಟವು ಯಶಸ್ವಿಯಾಗಿ ನೆರವೇರಲೆಂದು ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

Jaya Refrigeration and Air Condition

ಬರುವ ಜುಲೈ 26, 2026 (ಭಾನುವಾರ) ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಲಿರುವ ಈ ಕ್ರೀಡಾಕೂಟವು ವಿವಿಧ ಆಟೋಟ ಸ್ಪರ್ಧೆಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ. ವಿವಿಧ ಗಣ್ಯರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಬಳಿಕ ಬಹುಮಾನ ವಿತರಣೆ ಹಾಗೂ ಸಮಾರೋಪ ಸಮಾರಂಭದೊಂದಿಗೆ ಕ್ರೀಡೋತ್ಸವಕ್ಕೆ ತೆರೆ ಬೀಳಲಿದೆ.

ಕಾರ್ಯಕ್ರಮದಲ್ಲಿ ಭಟ್ಟಿ ವಿನಾಯಕ ದೇವಸ್ಥಾನದ ಪ್ರಧಾನ ಅರ್ಚಕರಾದ ವೆಂಕಟರಮಣ ಭಟ್, ಪ್ರಕಾಶ್ ಕಾಂತಿಲ, ಕಟ್ಟೆ ಫ್ರೆಂಡ್ಸ್ ಅಧ್ಯಕ್ಷರಾದ ದಿನೇಶ್ ಓಟೆ ಹಾಗೂ ಕಟ್ಟೆ ಫ್ರೆಂಡ್ಸ್‌ನ ಸರ್ವ ಸದಸ್ಯರು ಉಪಸ್ಥಿತರಿದ್ದರು.