Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಪುತ್ತೂರು: ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತಾ ಅವರ ನಿವಾಸಕ್ಕೆ ಡಾ. ಅರುಣ್ ಶ್ಯಾಮ್ ಭೇಟಿ ನೀಡಿದ್ದಾರೆ. ಬೋಳಂತಿಮೊಗರು ಕೆಸರುಗದ್ದೆ ಕ್ರೀಡಾಕೂಟಕ್ಕೆ ಆಗಮಿಸಿದ ಇವರು ಬಿಜೆಪಿ ಜಿಲ್ಲಾ ಉಪಾಧ್ಯಕ್ಷರ ಮನೆಗೂ ಭೇಟಿ ನೀಡಿದ್ದಾರೆ.

Out Look Fashion

ಪುತ್ತೂರಿನಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಇನ್ನೂ ಅಧಿಕೃತವಾಗಿ ಘೋಷಣೆ ಮಾಡಿಲ್ಲ. ಆದರೆ, ಇತ್ತೀಚಿನ ದಿನಗಳಲ್ಲಿ ಡಾ. ಅರುಣ್ ಶ್ಯಾಮ್ ಅವರು ಪುತ್ತೂರು ಭಾಗದಲ್ಲಿ ಹೆಚ್ಚು ಸಕ್ರಿಯವಾಗಿ ಕಾಣಿಸಿಕೊಳ್ಳುತ್ತಿದ್ದು, ವಿವಿಧ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಈ ತಿಂಗಳಲ್ಲಿ ನಡೆಯಲಿರುವ ಕೆಲವು ಕೆಸರುಗದ್ದೆ ಕ್ರೀಡಾಕೂಟಗಳಲ್ಲೂ ಅವರು ಅತಿಥಿಯಾಗಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.

Jaya Refrigeration and Air Condition

ಹಿಂದೂ ಸಂಘಟನೆಗಳ ಪರವಾಗಿ ಹಲವು ಮಹತ್ವದ ಪ್ರಕರಣಗಳಲ್ಲಿ ವಕಾಲತ್ತು ವಹಿಸಿ ಯುವಕರಿಗೆ ನ್ಯಾಯ ದೊರಕಿಸಿಕೊಟ್ಟಿರುವ ಹಿನ್ನೆಲೆಯುಳ್ಳ ಡಾ. ಅರುಣ್ ಶ್ಯಾಮ್ ಅವರಿಗೆ ಪುತ್ತೂರಿನಲ್ಲಿ ಯುವಕರ ಒಂದು ಬೆಂಬಲವಿದೆ ಎಂಬ ಮಾತುಗಳೂ ಕೇಳಿಬರುತ್ತಿವೆ. ಇತ್ತೀಚೆಗೆ ಅವರು ಬಿಜೆಪಿ ರಾಷ್ಟ್ರ ನಾಯಕರನ್ನು ಭೇಟಿಯಾಗಿರುವುದು ಕೂಡ ರಾಜಕೀಯ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.

ಈ ಎಲ್ಲ ಬೆಳವಣಿಗೆಗಳ ನಡುವೆ, ಪುತ್ತೂರು ಬಿಜೆಪಿ ಅಭ್ಯರ್ಥಿಯಾಗಿ ಡಾ. ಅರುಣ್ ಶ್ಯಾಮ್ ಹೆಸರು ಅಂತಿಮವಾಗಬಹುದೇ ಎಂಬ ಚರ್ಚೆ ಸಾರ್ವಜನಿಕ ವಲಯದಲ್ಲಿ ಜೋರಾಗಿದೆ. ಆದರೆ, ಬಿಜೆಪಿ ಇನ್ನೂ ಅಧಿಕೃತ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ ಎಂಬುದು ಗಮನಾರ್ಹ.