




ಪುತ್ತೂರು ತಾಲೂಕಿನ ಬಲ್ನಾಡು ಉಜಿರುಪಾದೆ ಸಮೀಪ ಭಾರಿ ಗಾಳಿ-ಮಳೆಯ ಪರಿಣಾಮ ಬೃಹತ್ ಹಲಸಿನ ಮರವೊಂದು ವಿದ್ಯುತ್ ಕಂಬದ ಮೇಲೆ ಉರುಳಿ ಬಿದ್ದ ಘಟನೆ ಭಾನುವಾರ ಮಧ್ಯಾಹ್ನ ಸುಮಾರು 3:45ರ ವೇಳೆಗೆ ನಡೆದಿದೆ.


ಮರ ಬಿದ್ದ ಪರಿಣಾಮ ವಿದ್ಯುತ್ ಕಂಬಕ್ಕೆ ಹಾನಿಯಾಗಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಘಟನೆಯ ಮಾಹಿತಿ ತಿಳಿದ ಕೂಡಲೇ ವಿದ್ಯುತ್ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ವಿದ್ಯುತ್ ಸಂಪರ್ಕ ಮರುಸ್ಥಾಪನೆ ಹಾಗೂ ಅಪಾಯ ನಿವಾರಣೆಗೆ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ.

ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಅಥವಾ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ. ಭಾರಿ ಗಾಳಿ-ಮಳೆಯ ಹಿನ್ನೆಲೆ ಸಾರ್ವಜನಿಕರು ಎಚ್ಚರಿಕೆಯಿಂದ ಸಂಚರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
